
ಮಂಡ್ಯ 14 ಜೂನ್ (ಹಿ.ಸ.):
ಆ್ಯಂಕರ್:
ಮಹಿಳೆಯರ ಸುರಕ್ಷತೆ ಮತ್ತು ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಅಕ್ಕ ಪಡೆಯ ಸಿಬ್ಬಂದಿಗಳು ಇಂದು ಮಂಡ್ಯ ನಗರದ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಿದರು.
ನಗರದ ಬಸ್ ನಿಲ್ದಾಣ, ಆಸ್ಪತ್ರೆ, ರೈಲ್ವೆ ನಿಲ್ದಾಣ ಸೇರಿದಂತೆ ಜನಸಂದಣಿ ಇರುವ ಪ್ರಮುಖ ಪ್ರದೇಶಗಳಲ್ಲಿ ಗಸ್ತು ನಡೆಸಿದ ಸಿಬ್ಬಂದಿಗಳು ಮಹಿಳೆಯರಿಗೆ ಸರಗಳ್ಳತನದ ಬಗ್ಗೆ ಎಚ್ಚರಿಕೆ ವಹಿಸುವುದು, ಭಿಕ್ಷಾಟನೆ ತಡೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ಮಾಹಿತಿ ನೀಡಿದರು.
ಇದೇ ವೇಳೆ ಅಕ್ಕ ಪಡೆ ಸಹಾಯವಾಣಿ ಸಂಖ್ಯೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ತುರ್ತು ಪರಿಸ್ಥಿತಿಗಳಲ್ಲಿ ಹಾಗೂ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳ ಸಂದರ್ಭದಲ್ಲಿ ಸಹಾಯವಾಣಿಯನ್ನು ಬಳಸಿಕೊಳ್ಳುವಂತೆ ತಿಳಿಸಿದರು.
ಮಹಿಳೆಯರ ಸುರಕ್ಷತೆ, ಕಾನೂನು ಅರಿವು ಹಾಗೂ ಸಾಮಾಜಿಕ ಕಳಕಳಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಅಕ್ಕ ಪಡೆಯ ಸಿಬ್ಬಂದಿಗಳು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.