ರಕ್ತದಾನಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೃತಜ್ಞತೆ
ಬೆಂಗಳೂರು, 14 ಜೂನ್ (ಹಿ.ಸ.) : ಆ್ಯಂಕರ್ : ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಕ್ತದಾನಿಗಳ ಸೇವೆಯನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಪ್ರತಿದಿನ ಆಸ್ಪತ್ರೆಗಳಲ್ಲಿ ಅನೇಕ ಜೀ
Cm post


ಬೆಂಗಳೂರು, 14 ಜೂನ್ (ಹಿ.ಸ.) :

ಆ್ಯಂಕರ್ : ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಕ್ತದಾನಿಗಳ ಸೇವೆಯನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಪ್ರತಿದಿನ ಆಸ್ಪತ್ರೆಗಳಲ್ಲಿ ಅನೇಕ ಜೀವಗಳು ಉಳಿಯಲು ರಕ್ತದಾನಿಗಳ ಕೊಡುಗೆ ಪ್ರಮುಖ ಕಾರಣವಾಗುತ್ತಿದೆ ಎಂದು ಹೇಳಿದ್ದಾರೆ.

“ಪ್ರತಿದಿನ ನಮ್ಮ ಆಸ್ಪತ್ರೆಗಳಲ್ಲಿ, ಯಾರೋ ಒಬ್ಬರು ಎಲ್ಲೋ ರಕ್ತದಾನ ಮಾಡಲು ಆಯ್ಕೆ ಮಾಡಿಕೊಂಡ ಕಾರಣ ಜೀವಗಳನ್ನು ಉಳಿಸಲಾಗುತ್ತಿದೆ. ವಿಶ್ವ ರಕ್ತದಾನಿಗಳ ದಿನದಂದು ಸರಳ ರಕ್ತದಾನದ ಮೂಲಕ ರೋಗಿಗಳು ಚೇತರಿಸಿಕೊಳ್ಳಲು ಸಹಾಯ ಮಾಡಿದ, ಸಂಕಷ್ಟದ ಸಮಯದಲ್ಲಿ ಕುಟುಂಬಗಳಿಗೆ ಬೆಂಬಲ ನೀಡಿದ ಹಾಗೂ ನಮ್ಮ ಸಮಾಜದಲ್ಲಿ ಸಹಾನುಭೂತಿಯ ಮನೋಭಾವವನ್ನು ಬಲಪಡಿಸಿದ ಪ್ರತಿಯೊಬ್ಬ ರಕ್ತದಾನಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ರಕ್ತದಾನವು ಮಾನವೀಯತೆಯ ಅತ್ಯುನ್ನತ ಸೇವೆಗಳಲ್ಲಿ ಒಂದಾಗಿದ್ದು, ಅದು ಅನೇಕ ಕುಟುಂಬಗಳಿಗೆ ಹೊಸ ಭರವಸೆ ನೀಡುತ್ತದೆ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಸಂಸ್ಕೃತಿಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಹೆಚ್ಚಿನ ಜನರು ರಕ್ತದಾನ ಮಾಡಲು ಮುಂದಾಗುವ ಮೂಲಕ ಜೀವ ಉಳಿಸುವ ಈ ಮಹತ್ವದ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಅವರು ಕರೆ ನೀಡಿದ್ದಾರೆ.

ರಕ್ತದಾನದ ಮಹತ್ವದ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದರ ಜೊತೆಗೆ, ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ರಕ್ತದಾನ ಸಂಸ್ಕೃತಿಯನ್ನು ನಿರಂತರವಾಗಿ ಪೋಷಿಸೋಣ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande