
ಬಾಗಲಕೋಟೆ, 14 ಜೂನ್ (ಹಿ.ಸ.) :
ಆಂಕರ್ : ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಂಸದರಾದ ವಿ.ಎಸ್. ಉಗ್ರಪ್ಪ ಅವರನ್ನು ಇಂದು ಬಾಗಲಕೋಟೆಯ ಹೊಸ ಪ್ರವಾಸಿ ಮಂದಿರದಲ್ಲಿ ಶಾಸಕ ಉಮೇಶ್ ಮೇಟಿ ಭೇಟಿ ಮಾಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಬಲವರ್ಧನೆ, ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸೌಹಾರ್ದಯುತ ಚರ್ಚೆ ನಡೆಯಿತು. ಪಕ್ಷದ ತಳಮಟ್ಟದ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ಚುರುಕುಗೊಳಿಸುವುದು ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲಾಯಿತು.
ಮಾಜಿ ಸಂಸದ ಉಗ್ರಪ್ಪ ಅವರು ಪಕ್ಷದ ಸಂಘಟನೆಯ ಮಹತ್ವ, ಕಾರ್ಯಕರ್ತರ ಪಾತ್ರ ಹಾಗೂ ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುವ ಅಗತ್ಯತೆಯ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಭೇಟಿಯ ವೇಳೆ ರಾಜ್ಯ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಜನಪರ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಕುರಿತು ನಾಯಕರು ಚಿಂತನೆ ನಡೆಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದು, ಪಕ್ಷದ ಸಂಘಟನೆ ಮತ್ತು ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande