ನವನಗರ ಬಸ್ ನಿಲ್ದಾಣ : ₹105 ಲಕ್ಷ ವೆಚ್ಚದ ಡಾಂಬರೀಕರಣ ಕಾಮಗಾರಿಗೆ ಶಾಸಕ ಉಮೇಶ ಮೇಟಿ ಚಾಲನೆ
ಬಾಗಲಕೋಟೆ, 14 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ನಗರದ ನವನಗರ ಬಸ್ ನಿಲ್ದಾಣದ ಆವರಣದ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಡಲಾಗಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಕೈಗೆತ್ತಿಕೊಂಡಿರುವ ಡಾಂಬರೀಕರಣ ಕಾಮಗಾರಿಗೆ ಶಾಸಕ ಉಮೇಶ ಮೇಟಿ ಅವರು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ನವನಗರ ಬಸ್ ನಿಲ್ದಾಣದ
Bus


ಬಾಗಲಕೋಟೆ, 14 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ನಗರದ ನವನಗರ ಬಸ್ ನಿಲ್ದಾಣದ ಆವರಣದ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಡಲಾಗಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಕೈಗೆತ್ತಿಕೊಂಡಿರುವ ಡಾಂಬರೀಕರಣ ಕಾಮಗಾರಿಗೆ ಶಾಸಕ ಉಮೇಶ ಮೇಟಿ ಅವರು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ನವನಗರ ಬಸ್ ನಿಲ್ದಾಣದ ಪೂರ್ವ ಹಾಗೂ ದಕ್ಷಿಣ ಭಾಗದಲ್ಲಿ ಕೈಗೊಳ್ಳಲಾಗುತ್ತಿರುವ ಈ ಕಾಮಗಾರಿಗೆ ಸುಮಾರು ₹105 ಲಕ್ಷ ವೆಚ್ಚವಾಗಲಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ಬಸ್ ನಿಲ್ದಾಣದ ಆವರಣದಲ್ಲಿ ಸಂಚಾರ ವ್ಯವಸ್ಥೆ ಸುಗಮವಾಗಲಿದೆ. ಮಳೆಗಾಲದಲ್ಲಿ ಉಂಟಾಗುವ ಕೆಸರು, ಗುಂಡಿಗಳ ಸಮಸ್ಯೆ ನಿವಾರಣೆಯಾಗುವುದರ ಜೊತೆಗೆ ಪ್ರಯಾಣಿಕರಿಗೆ ಸ್ವಚ್ಛ, ಸುರಕ್ಷಿತ ಹಾಗೂ ಉತ್ತಮ ವಾತಾವರಣ ದೊರೆಯಲಿದೆ ಎಂದು ತಿಳಿಸಲಾಯಿತು.

ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಆರ್. ಪಾಟೀಲ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ (BTDA) ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಸೇರಿದಂತೆ ಹಲವು ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸಾರ್ವಜನಿಕರ ಅಗತ್ಯಗಳಿಗೆ ಅನುಗುಣವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ನವನಗರ ಬಸ್ ನಿಲ್ದಾಣವು ನಗರದ ಪ್ರಮುಖ ಸಾರಿಗೆ ಕೇಂದ್ರವಾಗಿರುವ ಹಿನ್ನೆಲೆಯಲ್ಲಿ ಆವರಣದ ಅಭಿವೃದ್ಧಿ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande