ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ:ಡಿ.ಕೆ. ಶಿವಕುಮಾರ್
ಬೆಂಗಳೂರು, 14 ಜೂನ್ (ಹಿ.ಸ.): ಆ್ಯಂಕರ್: ರಾಜ್ಯ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ಯಾರಂಟಿ ಯೋಜನ
Cm post


ಬೆಂಗಳೂರು, 14 ಜೂನ್ (ಹಿ.ಸ.):

ಆ್ಯಂಕರ್:

ರಾಜ್ಯ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಸಂಪೂರ್ಣ ಸುಳ್ಳು ಎಂದು ಹೇಳಿದ್ದಾರೆ. ಸಾರ್ವಜನಿಕರು ಇಂತಹ ತಪ್ಪು ಮಾಹಿತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

ಕೆಲವು ಕಡೆಗಳಲ್ಲಿ ಮೃತಪಟ್ಟ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಯೋಜನೆಗಳ ಲಾಭ ಪಡೆಯುತ್ತಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿವೆ. ಈ ಹಿನ್ನೆಲೆಯಲ್ಲಿ ನಿಜವಾದ ಫಲಾನುಭವಿಗಳ ಹೆಸರು, ವಿಳಾಸ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ಪರಿಶೀಲಿಸಿ ದೃಢೀಕರಿಸುವ ಉದ್ದೇಶದಿಂದ ಮರುಪರಿಶೀಲನೆ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಪರಿಶೀಲನೆ ಯೋಜನೆಗಳನ್ನು ಸ್ಥಗಿತಗೊಳಿಸುವುದಕ್ಕಾಗಿ ಅಲ್ಲ. ಬದಲಾಗಿ, ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಗಳ ಸೌಲಭ್ಯಗಳು ತಲುಪುವಂತೆ ನೋಡಿಕೊಳ್ಳಲು ಹಾಗೂ ಅಕ್ರಮಗಳನ್ನು ತಡೆಯಲು ಈ ಕ್ರಮ ಜಾರಿಗೆ ತರಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿದ್ದು, ಫಲಾನುಭವಿಗಳು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

“ಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ” ಎಂಬ ಸಂದೇಶದೊಂದಿಗೆ ಸರ್ಕಾರ ತನ್ನ ಜನಪರ ಯೋಜನೆಗಳಿಗೆ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande