ಮಳೆ ಹಾನಿಗೊಳಗಾದ ಕಾರ್ಯಕರ್ತರ ಮನೆಗೆ ಶಾಸಕ ಉಮೇಶ್ ಮೇಟಿ ಭೇಟಿ
ಬಾಗಲಕೋಟೆ, 14 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ನಗರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ನಗರದ ವಲ್ಲಭಭಾಯಿ ಚೌಕ್ ಸಮೀಪದ ನಿವಾಸಕ್ಕೆ ಶಾಸಕ ಉಮೇಶ್ ಮೇಟಿ ಅವರು ರಾತ್ರಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ತಮ್ಮ ಪಕ್ಷದ ಕಾರ್ಯಕರ್ತ ಶ್ರೀ ಶಬ್ಬೀರ್ ಬಾಗವಾನ್ ಅವರ ಮನೆ
Nheti


ಬಾಗಲಕೋಟೆ, 14 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ನಗರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ನಗರದ ವಲ್ಲಭಭಾಯಿ ಚೌಕ್ ಸಮೀಪದ ನಿವಾಸಕ್ಕೆ ಶಾಸಕ ಉಮೇಶ್ ಮೇಟಿ ಅವರು ರಾತ್ರಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ತಮ್ಮ ಪಕ್ಷದ ಕಾರ್ಯಕರ್ತ ಶ್ರೀ ಶಬ್ಬೀರ್ ಬಾಗವಾನ್ ಅವರ ಮನೆಗೆ ತೆರಳಿದ ಶಾಸಕರು, ಮಳೆಯಿಂದ ಉಂಟಾದ ಹಾನಿ ಹಾಗೂ ಕುಟುಂಬ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿ ಅವರ ಅಹವಾಲುಗಳನ್ನು ಆಲಿಸಿದ ಅವರು, ಸಂಕಷ್ಟದ ಸಮಯದಲ್ಲಿ ಧೈರ್ಯ ಕಳೆದುಕೊಳ್ಳದೆ ಇರಲು ಆತ್ಮಸ್ಥೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ ಅವರು, ಕಾರ್ಯಕರ್ತರು ಹಾಗೂ ಸಾರ್ವಜನಿಕರ ಕಷ್ಟ-ಸುಖಗಳಲ್ಲಿ ಭಾಗಿಯಾಗುವುದು ತಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅಗತ್ಯ ನೆರವು ದೊರೆಯುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಭಾರಿ ಮಳೆಯಿಂದ ಮನೆಗಳಿಗೆ ಹಾಗೂ ಸಾರ್ವಜನಿಕ ಆಸ್ತಿಗಳಿಗೆ ಉಂಟಾಗಿರುವ ಹಾನಿಯ ಕುರಿತು ಪರಿಶೀಲನೆ ನಡೆಸಲಾಗುತ್ತಿದ್ದು, ಸಂತ್ರಸ್ತರಿಗೆ ಸಾಧ್ಯವಾದಷ್ಟು ನೆರವು ಒದಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.

ಜನರೊಂದಿಗೆ ಸದಾ ಇದ್ದು, ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ನಮ್ಮ ಆದ್ಯತೆ. ಸಂಕಷ್ಟದ ಸಂದರ್ಭಗಳಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರ ಬೆಂಬಲಕ್ಕೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ಶಾಸಕ ಉಮೇಶ್ ಮೇಟಿ ಹೇಳಿದರು.

ಶಾಸಕರ ಭೇಟಿ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande