ಅಪ್ರಾಪ್ತರಿಗೆ ಮದ್ಯ ಮಾರಾಟಕ್ಕೆ ಕಡಿವಾಣ : ಹೊಟೇಲ್-ಬಾರ್ ಮಾಲೀಕರಿಗೆ ಪೊಲೀಸರ ಎಚ್ಚರಿಕೆ
ಬಾಗಲಕೋಟೆ, 14 ಜೂನ್ (ಹಿ.ಸ.) : ಆಂಕರ್ : ಮುಧೋಳ ಗರದ ಹೊಟೇಲ್ ಹಾಗೂ ಬಾರ್ ಮಾಲೀಕರೊಂದಿಗೆ ಮುಧೋಳ ಪೊಲೀಸ್ ಇಲಾಖೆ ಮಹತ್ವದ ಸಭೆ ನಡೆಸಿ, ಅಪ್ರಾಪ್ತ ವಯಸ್ಕರಿಗೆ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿತು. ನಗರದ ಸಿಪಿಐ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಡಿವ
Sabje


ಬಾಗಲಕೋಟೆ, 14 ಜೂನ್ (ಹಿ.ಸ.) :

ಆಂಕರ್ : ಮುಧೋಳ ಗರದ ಹೊಟೇಲ್ ಹಾಗೂ ಬಾರ್ ಮಾಲೀಕರೊಂದಿಗೆ ಮುಧೋಳ ಪೊಲೀಸ್ ಇಲಾಖೆ ಮಹತ್ವದ ಸಭೆ ನಡೆಸಿ, ಅಪ್ರಾಪ್ತ ವಯಸ್ಕರಿಗೆ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿತು.

ನಗರದ ಸಿಪಿಐ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಡಿವೈಎಸ್ಪಿ ಸಯ್ಯದ್ ರೋಷನ್ ಜಮೀರ ವಹಿಸಿದ್ದರು. ಸಭೆಯಲ್ಲಿ ಹೊಟೇಲ್, ಬಾರ್ ಮತ್ತು ಸಂಬಂಧಿತ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳು ಹಾಗೂ ಕಾನೂನು ನಿಯಮಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಮಾತನಾಡಿದ ಸಿಪಿಐ ಎಂ. ನಾಗರಡ್ಡಿ ಅವರು, ಅಪ್ರಾಪ್ತ ವಯಸ್ಕರನ್ನು ಮಾದಕ ವ್ಯಸನದಿಂದ ದೂರವಿಡುವ ಉದ್ದೇಶದಿಂದ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳನ್ನು ಪ್ರತಿಯೊಬ್ಬ ಬಾರ್ ಮತ್ತು ಹೊಟೇಲ್ ಮಾಲೀಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.

ಅಪ್ರಾಪ್ತರಿಗೆ ಯಾವುದೇ ಕಾರಣಕ್ಕೂ ಮದ್ಯ ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡಬಾರದು. ಗ್ರಾಹಕರ ವಯಸ್ಸಿನ ಬಗ್ಗೆ ಖಚಿತಪಡಿಸಿಕೊಂಡ ಬಳಿಕವೇ ಸೇವೆ ನೀಡಬೇಕು. ನಿಯಮ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ಯುವ ಸಮುದಾಯವನ್ನು ದುಶ್ಚಟಗಳಿಂದ ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪೊಲೀಸ್ ಇಲಾಖೆಯೊಂದಿಗೆ ಹೊಟೇಲ್ ಮತ್ತು ಬಾರ್ ಮಾಲೀಕರು ಸಹಕರಿಸಿ, ಸಮಾಜದಲ್ಲಿ ಆರೋಗ್ಯಕರ ವಾತಾವರಣ ನಿರ್ಮಿಸಲು ಕೈಜೋಡಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದರು.

ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ನಗರದ ವಿವಿಧ ಹೊಟೇಲ್ ಮತ್ತು ಬಾರ್ ಮಾಲೀಕರು ಉಪಸ್ಥಿತರಿದ್ದರು

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande