ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ಬೆಂಗಳೂರು, 14 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದಾದ್ಯಂತ ಇಂದು ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ
ರಾಜ್ಯದ ಹಲವೆಡೆ ಮಳೆ ಸಾಧ್ಯತೆ


ಬೆಂಗಳೂರು, 14 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಇಂದು ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯೂ ವ್ಯಕ್ತವಾಗಿದೆ.

ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಗುಡುಗು-ಸಿಡಿಲಿನ ಸಂದರ್ಭಗಳಲ್ಲಿ ಮರಗಳ ಕೆಳಗೆ ಆಶ್ರಯ ಪಡೆಯುವುದನ್ನು ತಪ್ಪಿಸುವುದು, ವಿದ್ಯುತ್ ಕಂಬಗಳು ಮತ್ತು ತೆರೆದ ಪ್ರದೇಶಗಳಿಂದ ದೂರವಿರುವುದು ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande