
ದಾವಣಗೆರೆ, 14 ಜೂನ್ (ಹಿ.ಸ.):
ಆ್ಯಂಕರ್:
ದಾವಣಗೆರೆಯಲ್ಲಿ ಇಂದು ನಡೆದ ಎಸ್‌ಟಿ ಮೀಸಲಾತಿ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿದ ಮಾಜಿ ಸಚಿವ ಬಿ. ಶ್ರೀರಾಮುಲು, ಪರಿಶಿಷ್ಟ ಪಂಗಡ ಸಮುದಾಯಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿರುವ ಅನ್ಯಾಯವನ್ನು ತೀವ್ರವಾಗಿ ಖಂಡಿಸಿದರು.
ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಟಿ ಸಮುದಾಯದ ಹಕ್ಕುಗಳು ಮತ್ತು ಮೀಸಲಾತಿ ಸಂಬಂಧಿತ ಬೇಡಿಕೆಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿದರು. ಸಮುದಾಯದ ನ್ಯಾಯಯುತ ಹಕ್ಕುಗಳಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ರಾಜುಗೌಡ ನಾಯಕ್, ಎಸ್‌ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಮಾಜಿ ಸಂಸದರಾದ ಸಣ್ಣ ಪಕೀರಪ್ಪ, ಬಿ.ವಿ. ನಾಯಕ್, ದೇವೇಂದ್ರಪ್ಪ, ಮಾಜಿ ಶಾಸಕರಾದ ಸೋಮಲಿಂಗಪ್ಪ, ರಾಮಚಂದ್ರಪ್ಪ, ತಿಪ್ಪೇಸ್ವಾಮಿ ಹವಲ್ದಾರ್, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಸೇರಿದಂತೆ ದಾವಣಗೆರೆ ಜಿಲ್ಲೆಯ ಬಿಜೆಪಿ ಮುಖಂಡರು, ಹಿರಿಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಮಾವೇಶದಲ್ಲಿ ಎಸ್‌ಟಿ ಸಮುದಾಯದ ಹಕ್ಕುಗಳ ರಕ್ಷಣೆ, ಮೀಸಲಾತಿ ವಿಚಾರದಲ್ಲಿ ಸರ್ಕಾರದ ನಿಲುವು ಹಾಗೂ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಚರ್ಚೆ ನಡೆಯಿತು. ಬಿಜೆಪಿ ನಾಯಕರು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸಮುದಾಯದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.