
ಬೆಂಗಳೂರು, 14 ಜೂನ್ (ಹಿ.ಸ.) :
ಆ್ಯಂಕರ್ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಚ್ಛತಾ ಕಾರ್ಯ ನಡೆಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದು, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಾಯಕರು ಸ್ವಚ್ಛತೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಆಗಿದ್ದು, ಸ್ವಚ್ಛ ಮತ್ತು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು.
ಸ್ವಚ್ಛ ಭಾರತ ಅಭಿಯಾನದ ಉದ್ದೇಶಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.