ಸಂಸ್ಕೃತಿಯ ಉಳಿವಿಗೆ ಸಾಂಪ್ರದಾಯಿಕ ಆಚರಣೆಗಳು ಅವಶ್ಯ: ರಜತ್ ಉಳ್ಳಾಗಡ್ಡಿಮಠ
ಹುಬ್ಬಳ್ಳಿ, 14 ಜೂನ್ (ಹಿ.ಸ.): ಆ್ಯಂಕರ್: ನಮ್ಮ ನಾಡಿನ ಶ್ರೀಮಂತ ಪರಂಪರೆ, ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಿ ಉಳಿಸುವ ನಿಟ್ಟಿನಲ್ಲಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಅಗತ್ಯವೆಂದು ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಹೇಳಿದರು. ಹುಬ್ಬಳ್ಳಿ
Program


ಹುಬ್ಬಳ್ಳಿ, 14 ಜೂನ್ (ಹಿ.ಸ.):

ಆ್ಯಂಕರ್:

ನಮ್ಮ ನಾಡಿನ ಶ್ರೀಮಂತ ಪರಂಪರೆ, ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಿ ಉಳಿಸುವ ನಿಟ್ಟಿನಲ್ಲಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಅಗತ್ಯವೆಂದು ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಹೇಳಿದರು.

ಹುಬ್ಬಳ್ಳಿ ನಾಗಲಿಂಗ ನಗರದಲ್ಲಿ ವಿದ್ಯಾನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ‘ಅಧಿಕ ಮಾಸದ ಬಾಗಿನ’ ಅರ್ಪಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

“ಅಧಿಕ ಮಾಸದ ಅವಧಿಯಲ್ಲಿ ಬಾಗಿನ ನೀಡುವುದು ನಮ್ಮ ಸನಾತನ ಧರ್ಮದ ಮಹತ್ವದ ಆಚರಣೆಯಾಗಿದೆ. ಇಂತಹ ಕಾರ್ಯಕ್ರಮಗಳು ಮಹಿಳೆಯರಲ್ಲಿ ಪರಸ್ಪರ ಪ್ರೀತಿ, ಸಾಮರಸ್ಯ ಹಾಗೂ ಒಗ್ಗಟ್ಟಿನ ಭಾವನೆಯನ್ನು ಬೆಳೆಸುತ್ತವೆ. ರಾಜಕೀಯ ಚಟುವಟಿಕೆಗಳ ನಡುವೆಯೂ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹಿಳಾ ಕಾಂಗ್ರೆಸ್ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ” ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಯಶಸ್ಸಿನ ಕುರಿತು ಸಂತಸ ವ್ಯಕ್ತಪಡಿಸಿದ ರಜತ್ ಉಳ್ಳಾಗಡ್ಡಿಮಠ, ಬಾಳಮ್ಮ ಜಂಗನವರ್ ಅವರ ನೇತೃತ್ವದಲ್ಲಿ ನಾಗಲಿಂಗ ನಗರದ ನೂರಾರು ಮಹಿಳೆಯರು ಉತ್ಸಾಹದಿಂದ ಭಾಗವಹಿಸಿ, ಸಂಪ್ರದಾಯಬದ್ಧವಾಗಿ ಬಾಗಿನ ಅರ್ಪಿಸಿ ಹಿರಿಯರ ಆಶೀರ್ವಾದ ಪಡೆದಿರುವುದು ವಿಶೇಷವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರವೀಣ ಹಿರೇಮಠ, ಹರಿ ನಾಯರ್, ಗಣೇಶ್ ಶಾಲ್ಗರ, ರೂಪಾ ಹಿರೇಮಠ, ಶೋಭಾ ದೇಸಾಯಿ, ಮಂಜುಳಾ ಬೆಣಗಿ, ಸಮಿತಿಯ ವಿವಿಧ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ನ ಹಿರಿಯ ಮುಖಂಡರು ಹಾಗೂ ನಾಗಲಿಂಗ ನಗರದ ಅಪಾರ ಸಂಖ್ಯೆಯ ಮಹಿಳಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande