ಕಲಾ ಪ್ರಕಾರಗಳ ಪ್ರದರ್ಶನಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ, 14 ಜೂನ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಪ್ರತಿಭಾವಂತ ಕಲಾವಿದರಿಗೆ ತಮ್ಮ ಕಲಾ ಕೌಶಲ್ಯ ಪ್ರದರ್ಶಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುವರ್ಣಾವಕಾಶ ಕಲ್ಪಿಸಿದ್ದು, ವಿವಿಧ ವಯೋಮಾನದ ಕಲಾವಿದರಿಗಾಗಿ ಆಯೋಜಿಸಲಾಗುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅರ್ಜಿಗಳ
ಕಲಾ ಪ್ರಕಾರಗಳ ಪ್ರದರ್ಶನಕ್ಕೆ ಅರ್ಜಿ ಆಹ್ವಾನ


ಶಿವಮೊಗ್ಗ, 14 ಜೂನ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಪ್ರತಿಭಾವಂತ ಕಲಾವಿದರಿಗೆ ತಮ್ಮ ಕಲಾ ಕೌಶಲ್ಯ ಪ್ರದರ್ಶಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುವರ್ಣಾವಕಾಶ ಕಲ್ಪಿಸಿದ್ದು, ವಿವಿಧ ವಯೋಮಾನದ ಕಲಾವಿದರಿಗಾಗಿ ಆಯೋಜಿಸಲಾಗುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅರ್ಜಿಗಳನ್ನು ಆಹ್ವಾನಿಸಿದೆ.

ಮಕ್ಕಳಿಗಾಗಿ ‘ಚಿಗುರು’, ಯುವಕರಿಗಾಗಿ ‘ಯುವಸೌರಭ’ ಹಾಗೂ ಹಿರಿಯ ಕಲಾವಿದರಿಗಾಗಿ ‘ಸಾಂಸ್ಕೃತಿಕ ಸೌರಭ’ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಂಗೀತ, ನೃತ್ಯ, ನಾಟಕ, ಯಕ್ಷಗಾನ, ಜನಪದ ಕಲೆ ಸೇರಿದಂತೆ ವಿವಿಧ ಕಲಾ ಪ್ರಕಾರಗಳಲ್ಲಿ ಪ್ರತಿಭೆ ಪ್ರದರ್ಶಿಸಲು ಅವಕಾಶ ನೀಡಲಾಗಿದೆ.

‘ಚಿಗುರು’ ಕಾರ್ಯಕ್ರಮದಲ್ಲಿ 8 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ವಚನ ಸಂಗೀತ, ಜನಪದ ಗೀತೆಗಳು, ಸಮೂಹ ನೃತ್ಯ, ನೃತ್ಯ ರೂಪಕ, ನಾಟಕ, ಯಕ್ಷಗಾನ, ಗೊಂಬೆಯಾಟ ಹಾಗೂ ಏಕಪಾತ್ರಾಭಿನಯ ವಿಭಾಗಗಳಲ್ಲಿ ಭಾಗವಹಿಸಲು ಅವಕಾಶವಿದೆ.

15 ರಿಂದ 30 ವರ್ಷದೊಳಗಿನ ಯುವಕರಿಗಾಗಿ ಆಯೋಜಿಸಲಾಗಿರುವ ‘ಯುವಸೌರಭ’ ಕಾರ್ಯಕ್ರಮದಲ್ಲಿ ಸುಗಮ ಸಂಗೀತ, ವಚನ ಸಂಗೀತ, ಜನಪದ ಗೀತೆಗಳು, ಸಮೂಹ ನೃತ್ಯ, ನೃತ್ಯ ರೂಪಕ, ಜನಪದ ಪ್ರದರ್ಶನ ಕಲಾತಂಡ ಹಾಗೂ ನಾಟಕ ವಿಭಾಗಗಳಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ.

30 ವರ್ಷ ಮೇಲ್ಪಟ್ಟ ಹಿರಿಯ ಕಲಾವಿದರಿಗಾಗಿ ‘ಸಾಂಸ್ಕೃತಿಕ ಸೌರಭ’ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಜನಪದ ಗೀತೆಗಳು, ಸಮೂಹ ನೃತ್ಯ, ಜನಪದ ಪ್ರದರ್ಶನ ಕಲಾತಂಡ, ನಾಟಕ, ಯಕ್ಷಗಾನ, ಗೊಂಬೆಯಾಟ, ಗಮಕ ಹಾಗೂ ಕಥಾಕೀರ್ತನೆ ವಿಭಾಗಗಳನ್ನು ಒಳಗೊಂಡಿದೆ.

ಆಸಕ್ತ ಅಭ್ಯರ್ಥಿಗಳು ವಯಸ್ಸಿನ ದೃಢೀಕರಣ ದಾಖಲೆಗಳ ಜೊತೆಗೆ ಸಂಗೀತ ವಿದ್ಯಾಭ್ಯಾಸದ ಪ್ರಮಾಣಪತ್ರಗಳು, ಆಕಾಶವಾಣಿ ‘ಬಿ’ ಗ್ರೇಡ್ ಪ್ರಮಾಣಪತ್ರ ಅಥವಾ ಸರ್ಕಾರದಿಂದ ಪಡೆದ ಪ್ರಶಸ್ತಿ-ಪುರಸ್ಕಾರಗಳ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.

ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕುವೆಂಪು ರಂಗಮಂದಿರ, ಶಿವಮೊಗ್ಗ ಈ ವಿಳಾಸಕ್ಕೆ ಜೂನ್ 25, 2026ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.

ಈ ಹಿಂದೆ ಇಲಾಖೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರದರ್ಶನ ನೀಡಿರುವ ಕಲಾವಿದರು ಈ ಬಾರಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಹೆಚ್ಚಿನ ಮಾಹಿತಿಗಾಗಿ 08182-223354 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande