ಹಿಂದುಳಿದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ; ಆಗಸ್ಟ್ 31 ಕೊನೆಯ ದಿನ
ಬಳ್ಳಾರಿ, 15 ಜೂನ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ವಿವಿಧ ವಿದ್ಯಾರ್ಥಿವೇತನ ಹಾಗೂ ಸೌಲಭ್ಯಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಅವರು
ಹಿಂದುಳಿದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ; ಆಗಸ್ಟ್ 31 ಕೊನೆಯ ದಿನ


ಬಳ್ಳಾರಿ, 15 ಜೂನ್ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ವಿವಿಧ ವಿದ್ಯಾರ್ಥಿವೇತನ ಹಾಗೂ ಸೌಲಭ್ಯಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ.

ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ: ಊಟ ಮತ್ತು ವಸತಿ ಸಹಾಯ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ SSP Postmatric Portal ಗೆ ಭೇಟಿ ನೀಡಬಹುದಾಗಿದೆ. ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande