ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ : ಡಿಸಿ
ಗದಗ, 15 ಜೂನ್ (ಹಿ.ಸ.) : ಆ್ಯಂಕರ್ : 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ನಗರದ ಕೆ. ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗ
ಫೋಟೋ


ಗದಗ, 15 ಜೂನ್ (ಹಿ.ಸ.) :

ಆ್ಯಂಕರ್ : 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ನಗರದ ಕೆ. ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯುಷ ಇಲಾಖೆಯ ವತಿಯಿಂದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ರಕ್ಷಣೆಗಾಗಿ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ಇಂದಿನ ಒತ್ತಡಮಯ ಜೀವನಶೈಲಿಯಿಂದಾಗಿ ಪ್ರತಿಯೊಬ್ಬರಿಗೂ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳು ಉಂಟಾಗುವುದು ಸರ್ವೇ ಸಾಮಾನ್ಯವಾಗಿದೆ. ಆದಕಾರಣ ನೌಕರರು ಹಾಗೂ ಸಾರ್ವಜನಿಕರು ಮಾನಸಿಕ ಹಾಗೂ ದೈಹಿಕ ಸದೃಢತೆಗೆ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆ ಹಾಗೂ ಕಾಲೇಜುಗಳಲ್ಲಿ ಯೋಗ ದಿನಾಚರಣೆಯನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು. ಕೇವಲ ಒಂದು ದಿನದ ಆಚರಣೆಯಾಗದೆ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹಾಗೂ ನೆನಪಿನ ಶಕ್ತಿಯನ್ನು ಉತ್ತಮಪಡಿಸಲು ಯೋಗವನ್ನು ನಿರಂತರವಾಗಿ ಅಭ್ಯಾಸ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ನಿರಂತರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯೋಗ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ವಯಸ್ಸಿನ ನಿರ್ಬಂಧವಿಲ್ಲದೆ, ಸಾರ್ವಜನಿಕರು, ಹಿರಿಯ ನಾಗರಿಕರು ಮತ್ತು ಯೋಗಾಸಕ್ತರು ಮುಕ್ತವಾಗಿ ಭಾಗವಹಿಸಲು ಸಾರ್ವಜನಿಕರ ಮುಕ್ತ ಭಾಗಿತ್ವ ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮದ ಸ್ಥಳದಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಎಲ್ಲಾ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಜಿಲ್ಲಾ ಆಯುಷ ಇಲಾಖೆಯ ಅಧಿಕಾರಿ ಡಾ. ಜುಬೇದಬೇಗಂ ಅವರು ಮಾತನಾಡಿ ಜೂನ್ 21 ರಂದು ಬೆಳಿಗ್ಗೆ 6.15 ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನಾ ಸಮಾರಂಭ ಜರುಗಲಿದೆ. ತದನಂತರ ಬೆಳಿಗ್ಗೆ 7 ಗಂಟೆಯಿಂದ ಯೋಗಾಭ್ಯಾಸ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮ ಹಿಂದಿನ ದಿನ ಜೂನ್ 20 ರಂದು 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾಥಾವು ಅಂದು ಬೆಳಿಗ್ಗೆ 9.30 ಗಂಟೆಗೆ ಗದಗ ಬೆಟಗೇರಿ ನಗರ ಆವರಣದಿಂದ ಹೊರಟು ಟಾಂಗಾ ಕೂಟ, ರೋಟರಿ ಸರ್ಕಲ್, ಗಾಂಧಿ ಸರ್ಕಲ್ ಮಾರ್ಗವಾಗಿ ನಗರಸಭೆ ಆವರಣಕ್ಕೆ ಬಂದು ತಲುಪಲಿದೆ ಎಂದು ಸಭೆಯಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ವಿವರಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ರಾಧಾ ಮಣ್ಣೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ.ಮಸನಾಯಕ, ಆಯುಷ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ಸಂಜೀವ ನಾರಪ್ಪನವರ, ಕೆ.ಎಚ್ ಪಾಟೀಲ್ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಸತೀಶ್ ಹೊಂಬಾಳಿ, ಬ್ರಹ್ಮಕುಮಾರಿ ಅಕ್ಕನವರು, ಆಯುಷ ವೈದ್ಯಾಧಿಕಾರಿಗಳ ಸಂಘದ ಕಾರ್ಯದರ್ಶಿ ಡಾ. ಬಿ.ಎಂ ಲೋಕಪುರಿ, ಡಾ. ಎಂ.ಎ ಹಾದಿಮನಿ, ಡಾ. ಸಾಯಿಪ್ರಕಾಶ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಯೋಗ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande