ಅಧಿಕ ಅಮಾವಾಸ್ಯೆ ಹಿನ್ನೆಲೆ ಕೂಡಲಸಂಗಮಕ್ಕೆ ಹರಿದು ಬಂದ ಭಕ್ತ ಸಾಗರ
ನಾನಾ
Temple


ಬಾಗಲಕೋಟೆ, 15 ಜೂನ್ (ಹಿ.ಸ.) :

ಆಂಕರ್ : ಅಧಿಕ ಅಮಾವಾಸ್ಯೆಯ ವಿಶೇಷ ಹಿನ್ನೆಲೆಯಲ್ಲಿ ಸೋಮವಾರ ಐತಿಹಾಸಿಕ ಪುಣ್ಯಕ್ಷೇತ್ರವಾದ ಕೂಡಲಸಂಗಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಸಂಗಮೇಶ್ವರನ ದರ್ಶನ ಪಡೆದರು.

ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ಭಕ್ತರು ಬೆಳಗ್ಗೆಯಿಂದಲೇ ದೇವಸ್ಥಾನದ ಆವರಣದಲ್ಲಿ ಸೇರಿ ದೇವರ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ನಿಂತಿದ್ದರು. ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಪೊಲೀಸ್ ಸಿಬ್ಬಂದಿ ಅಗತ್ಯ ವ್ಯವಸ್ಥೆಗಳನ್ನು ಕೈಗೊಂಡಿದ್ದರು.

ಅಧಿಕ ಅಮಾವಾಸ್ಯೆಯ ದಿನ ಸಂಗಮೇಶ್ವರನ ದರ್ಶನ ಪಡೆದರೆ ಪುಣ್ಯ ಲಭಿಸುತ್ತದೆ ಎಂಬ ಭಕ್ತರ ನಂಬಿಕೆಯ ಹಿನ್ನೆಲೆಯಲ್ಲಿ ಭಕ್ತರು ಕುಟುಂಬ ಸಮೇತರಾಗಿ ಕ್ಷೇತ್ರಕ್ಕೆ ಆಗಮಿಸಿದ್ದರು.

ಹಲವರು ಕೃಷ್ಣಾ ಹಾಗೂ ಮಲಪ್ರಭಾ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ಕೂಡಲಸಂಗಮದ ಸುತ್ತಮುತ್ತ ಭಕ್ತರ ಸಂಚಾರ ಹೆಚ್ಚಾಗಿದ್ದರಿಂದ ವಾಹನಗಳ ಓಡಾಟವೂ ಹೆಚ್ಚಾಗಿತ್ತು. ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರು, ಸ್ವಚ್ಛತೆ, ಭದ್ರತೆ ಸೇರಿದಂತೆ ಮೂಲಸೌಕರ್ಯಗಳ ವ್ಯವಸ್ಥೆ ಮಾಡಲಾಗಿತ್ತು.

ಅಧಿಕ ಅಮಾವಾಸ್ಯೆಯ ಪ್ರಯುಕ್ತ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಕ್ತಿಭಾವ ಮೆರೆದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande