ಜೆ.ಕೆ. ಸಿಮೆಂಟ್ ಕಾರ್ಖಾನೆ ವಿರುದ್ಧ ರೈತರ ಸಮರ ; ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ
ಬಾಗಲಕೋಟೆ, 15 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜೆ.ಕೆ. ಸಿಮೆಂಟ್ ಕಾರ್ಖಾನೆಯ ವಿವಿಧ ಸಮಸ್ಯೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರೈತರು, ಇಂದಿನಿಂದ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಉತ್ತರ ಕರ್ನಾಟಕ ರಾಜ್ಯ ರೈತ ಸಂಘದ ನೇತೃ
Strike


ಬಾಗಲಕೋಟೆ, 15 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜೆ.ಕೆ. ಸಿಮೆಂಟ್ ಕಾರ್ಖಾನೆಯ ವಿವಿಧ ಸಮಸ್ಯೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರೈತರು, ಇಂದಿನಿಂದ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಉತ್ತರ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಈ ಹೋರಾಟದಲ್ಲಿ ರೈತ ಮುಖಂಡರು, ಕಾರ್ಖಾನೆಯ ವಿಸ್ತರಣಾ ನೀತಿ, ಅಕ್ರಮ ಗಣಿಕಾರಿಕೆ, ಅತಿಯಾದ ಬ್ಲಾಸ್ಟಿಂಗ್ನಿಂದ ಉಂಟಾಗುತ್ತಿರುವ ಸಮಸ್ಯೆಗಳು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಕಾರ್ಖಾನೆಯ ಗಣಿಗಾರಿಕೆ ಚಟುವಟಿಕೆಗಳಿಂದ ಸುತ್ತಮುತ್ತಲಿನ ಗ್ರಾಮಗಳ ಮನೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ನಿರಂತರ ಬ್ಲಾಸ್ಟಿಂಗ್ನಿಂದ ಜನರಲ್ಲಿ ಆತಂಕ ಮೂಡಿದ್ದು, ಪರಿಸರ ಹಾಗೂ ಜನಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

ಕಾರ್ಖಾನೆ ಆಡಳಿತ ಮಂಡಳಿ ಸ್ಥಳೀಯರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಸುವ ಎಚ್ಚರಿಕೆ ನೀಡಿದ್ದಾರೆ.

ಧರಣಿ ಸ್ಥಳದಲ್ಲಿ ಬೃಹತ್ ಟೆಂಟ್ ಹಾಕಲಾಗಿದ್ದು, ರೈತ ಮುಖಂಡರು ಹಾಗೂ ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ನ್ಯಾಯ ದೊರೆಯುವವರೆಗೆ ಯಾವುದೇ ಕಾರಣಕ್ಕೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಸಂಘದ ಮುಖಂಡರು ತಿಳಿಸಿದ್ದಾರೆ.

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ರೈತರ ಹೋರಾಟದ ಹಿನ್ನೆಲೆಯಲ್ಲಿ ಕಾರ್ಖಾನೆ ಆಡಳಿತ ಮತ್ತು ಅಧಿಕಾರಿಗಳ ಮುಂದಿನ ಕ್ರಮಗಳತ್ತ ಎಲ್ಲರ ಗಮನ ನೆಟ್ಟಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande