ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು, 15 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ನಗರದ ವೈದೇಹಿ ಆಸ್ಪತ್ರೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆದಾಯ ಕುಸಿತದ
Cm


ಬೆಂಗಳೂರು, 15 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ನಗರದ ವೈದೇಹಿ ಆಸ್ಪತ್ರೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆದಾಯ ಕುಸಿತದ ನಡುವೆಯೂ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ಉದ್ದೇಶದಿಂದ ಸರ್ಕಾರ ಈ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಮುಂದುವರಿಸಲಾಗುವುದು ಎಂದು ಹೇಳಿದರು.

ಪ್ರತಿ ಪಕ್ಷಗಳು ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಪ್ರಚಾರ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿ ಪಕ್ಷಗಳ ಕೆಲಸವೇ ಸರ್ಕಾರದ ಕಾರ್ಯಗಳನ್ನು ಟೀಕಿಸುವುದಾಗಿದೆ. ಸರ್ಕಾರದ ಉದ್ದೇಶ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಗಳ ಲಾಭ ತಲುಪಿಸುವುದಾಗಿದೆ ಎಂದು ತಿಳಿಸಿದರು.

ಕೆಲವು ಫಲಾನುಭವಿಗಳು ಬೇರೆಯವರ ಮೊಬೈಲ್ ಸಂಖ್ಯೆ ಹಾಗೂ ಮಾಹಿತಿಯನ್ನು ನೀಡಿರುವ ಕಾರಣ ಯೋಜನೆಯ ಹಣ ತಪ್ಪು ಖಾತೆಗಳಿಗೆ ಜಮೆಯಾಗುತ್ತಿರುವ ಬಗ್ಗೆ ಮಾಹಿತಿ ದೊರೆತಿದೆ. ಈ ಸಮಸ್ಯೆ ನಿವಾರಣೆಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಯೋಜನೆಗಳ ಲಾಭ ನೇರವಾಗಿ ಅರ್ಹರ ಖಾತೆಗೆ ತಲುಪುವಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.

ರಾಜ್ಯದ ಜನರಿಗೆ ಮಾತ್ರ ಗ್ಯಾರಂಟಿ ಯೋಜನೆಗಳ ಸೌಲಭ್ಯ ದೊರೆಯಬೇಕು ಎಂಬ ಕಾರಣದಿಂದ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡುವ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande