ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ
ಬೆಂಗಳೂರು, 15 ಜೂನ್ (ಹಿ.ಸ.) : ಆ್ಯಂಕರ್ : ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಮುಂಜಾನೆ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ
ಕುಮಾರಸ್ವಾಮಿ ಶಬರಿಮಲೆ ಯಾತ್ರೆ


ಬೆಂಗಳೂರು, 15 ಜೂನ್ (ಹಿ.ಸ.) :

ಆ್ಯಂಕರ್ : ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.

ಇಂದು ಮುಂಜಾನೆ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಕುಮಾರಸ್ವಾಮಿ ಅವರು, ದೇವಾಲಯದಲ್ಲಿಯೇ ಇರುಮುಡಿ ಹೊತ್ತು ಶಬರಿಮಲೆ ಯಾತ್ರೆಗೆ ಹೊರಟರು.

ಮಧ್ಯಾಹ್ನದ ವೇಳೆಗೆ ಪಂಪಾ ನದಿ ತೀರವನ್ನು ತಲುಪಲಿರುವ ಸಚಿವರು ಹಾಗೂ ಅವರ ತಂಡ, ಪವಿತ್ರ ಸ್ನಾನ ನೆರವೇರಿಸಿ ಅಲ್ಲಿಂದ ಶಬರಿಮಲೆಯತ್ತ ಪಾದಯಾತ್ರೆ ಮುಂದುವರಿಸಲಿದ್ದಾರೆ. ಸಂಜೆ ಅಯ್ಯಪ್ಪ ಸನ್ನಿಧಿಯಲ್ಲಿ ನಡೆಯುವ ಪಡಿ ಪೂಜೆಯಲ್ಲಿ ಭಾಗವಹಿಸಲಿರುವ ಅವರು, ಬಳಿಕ ಅಯ್ಯಪ್ಪ ಸ್ವಾಮಿಗೆ ನಡೆಯುವ ಪುಷ್ಪಾಭಿಷೇಕ ಸೇವೆಯಲ್ಲೂ ಪಾಲ್ಗೊಳ್ಳಲಿದ್ದಾರೆ.

ಈ ಯಾತ್ರೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು ಹಾಗೂ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಶಾಸಕ ಶರಣಗೌಡ ಕಂದಕೂರ, ಮಾಜಿ ಶಾಸಕ ಮಾಗಡಿ ಮಂಜುನಾಥ್, ಹೆಚ್.ಎಂ. ರಮೇಶ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande