ಬೆಂಗಳೂರಿನ ದುಸ್ಥಿತಿಗೆ ಸರ್ಕಾರದ ಆಂತರಿಕ ಕಲಹ ಕಾರಣ : ಆರ್. ಅಶೋಕ್
ಬೆಂಗಳೂರು, 15 ಜೂನ್ (ಹಿ.ಸ.) : ಆ್ಯಂಕರ್ : ಕೇವಲ ಒಂದು ಸಾಧಾರಣ ಮಳೆಗೆ ಸಿಲಿಕಾನ್ ಸಿಟಿ ‘ಸಿಂಕಿಂಗ್ ಸಿಟಿ’ಯಾಗಿ ಬದಲಾಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇ
ಅಶೋಕ


ಬೆಂಗಳೂರು, 15 ಜೂನ್ (ಹಿ.ಸ.) :

ಆ್ಯಂಕರ್ : ಕೇವಲ ಒಂದು ಸಾಧಾರಣ ಮಳೆಗೆ ಸಿಲಿಕಾನ್ ಸಿಟಿ ‘ಸಿಂಕಿಂಗ್ ಸಿಟಿ’ಯಾಗಿ ಬದಲಾಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಭೈರೆಗೌಡ ಅವರ ಅಸಮಾಧಾನ ಮತ್ತು ಸಚಿವ ಸಂಪುಟದ ಒಳಜಗಳಗಳೇ ನಗರದ ಅಭಿವೃದ್ಧಿಗೆ ಅಡ್ಡಿಯಾಗಿವೆ ಎಂದು ಆರೋಪಿಸಿದ್ದಾರೆ.

“ಬೆಂಗಳೂರು ಅಭಿವೃದ್ಧಿ ಇಲಾಖೆಯ ಜವಾಬ್ದಾರಿ ವಹಿಸಿಕೊಳ್ಳಲು ಸಚಿವರಿಗೆ ಆಸಕ್ತಿಯೇ ಇಲ್ಲ. ಆದರೆ ಮಳೆ ಬಂದಾಗ ಬೆಂಗಳೂರಿನ ಜನರು ರಸ್ತೆಗಳ ಮೇಲೆ ನರಕಯಾತನೆ ಅನುಭವಿಸುತ್ತಿದ್ದಾರೆ. ಬಿಡಿಎ ಮತ್ತು ಬಿಎಂಆರ್ಡಿಎ ಅಧಿಕಾರ ಕೈತಪ್ಪುವ ಭಯವೇ ಈ ಅಸಮಾಧಾನಕ್ಕೆ ಕಾರಣವೇ?” ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರದಲ್ಲಿ ನಿಜವಾದ ಅಧಿಕಾರ ಹೈಕಮಾಂಡ್ ಕೈಯಲ್ಲಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇವಲ ‘ರಬ್ಬರ್ ಸ್ಟಾಂಪ್’ ಆಗಿ ಉಳಿದಿದ್ದಾರೆ ಎಂದು ಟೀಕಿಸಿರುವ ಅವರು, ತಮ್ಮದೇ ಸಚಿವರ ಅಸಮಾಧಾನವನ್ನು ನಿವಾರಿಸಲು ಸಾಧ್ಯವಾಗದ ಸ್ಥಿತಿಯಲ್ಲಿ ಸರ್ಕಾರ ಇದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನ ಇಂದಿನ ಸ್ಥಿತಿಯನ್ನು ಉಲ್ಲೇಖಿಸಿದ ಅಶೋಕ, “ಸಚಿವರಿಗೆ ಬಿಡಿಎ ಮತ್ತು ಬಿಎಂಆರ್ಡಿಎ ಕುರಿತ ಚಿಂತೆ, ಮುಖ್ಯಮಂತ್ರಿಗೆ ಹೈಕಮಾಂಡ್ ಮುಂದೆ ಅಸಹಾಯಕತೆ, ಜನತೆಗೆ ಮಾತ್ರ ರಸ್ತೆಗಳಲ್ಲಿ ನಿಂತ ಮಳೆ ನೀರಿನಿಂದ ಸಂಕಷ್ಟ” ಎಂದು ವ್ಯಂಗ್ಯವಾಡಿದ್ದಾರೆ.

‘ಬ್ರ್ಯಾಂಡ್ ಬೆಂಗಳೂರು’ ಹೆಸರಿನಲ್ಲಿ ಪ್ರಚಾರ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಆಂತರಿಕ ಕಲಹ ಮತ್ತು ಅಧಿಕಾರದ ರಾಜಕಾರಣವನ್ನು ಬದಿಗಿಟ್ಟು ನಗರದ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿರುವ ಅವರು, “ಸಚಿವರು ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡಬೇಕು, ಇಲ್ಲವಾದರೆ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳತ್ತ ತಕ್ಷಣ ಗಮನಹರಿಸಿ ಶಾಶ್ವತ ಪರಿಹಾರ ಕಂಡುಹಿಡಿಯಬೇಕು. ಇಲ್ಲದಿದ್ದರೆ ಜನತೆ ಸರ್ಕಾರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande