
ಕೂಡ್ಲಿಗಿ, 15 ಜೂನ್ (ಹಿ.ಸ.) :
ಆ್ಯಂಕರ್ : ಕೂಡ್ಲಿಗಿ ತಾಲ್ಲೂಕಿನ ಸಿದ್ದಾಪುರ ಗೊಲ್ಲರಹಟ್ಟಿ ಗ್ರಾಮದ ನಿವಾಸಿ ಸಿದ್ದಮ್ಮ (30) ಮಹಿಳೆ 2024 ರ ಮೇ 23 ರಂದು ಬೆಳಗಿನ ಜಾವ 4 ಗಂಟೆಗೆ ಮನೆಯಿಂದ ಬಹಿರ್ದೆಸೆಗೆ ಹೋಗಿ ಬರುವುದಾಗಿ ಹೇಳಿ ಪುನ: ಮನೆಗೆ ಬಾರದೇ ಕಾಣೆಯಾಗಿದ್ದು, ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಕಾಣೆಯಾದ ಮಹಿಳೆಯ ಚಹರೆ: ಎತ್ತರ 5.4 ಅಡಿ, ತೆಳುವಾದ ಮೈಕಟ್ಟು, ಗೋದಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಮನೆಯಿಂದ ಹೊರಡುವಾಗ ಹಸಿರು ಬಣ್ಣದ ಸೀರೆ ಮತ್ತು ಕುಪ್ಪಸ ಧರಿಸಿರುತ್ತಾಳೆ. ಕನ್ನಡ ಮಾತನಾಡುತ್ತಾಳೆ. ಕಾಣೆಯಾದ ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್