ಗೃಹಲಕ್ಷ್ಮಿ ಹಣ ದುರುಪಯೋಗ ತಡೆಯಲು ಕ್ರಮ : ಮುಖ್ಯಮಂತ್ರಿ
ಬೆಂಗಳೂರು, 15 ಜೂನ್ (ಹಿ.ಸ.) : ಆ್ಯಂಕರ್ : ಗೃಹಲಕ್ಷ್ಮಿ ಸೇರಿದಂತೆ ಗ್ಯಾರಂಟಿ ಯೋಜನೆಗಳ ಮೂಲಕ ನೀಡಲಾಗುತ್ತಿರುವ ಹಣವನ್ನು ಕೆಲವರು ನಕಲಿ ಹಣಕಾಸು ಯೋಜನೆಗಳಿಗೆ ಬಳಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು
Cm


ಬೆಂಗಳೂರು, 15 ಜೂನ್ (ಹಿ.ಸ.) :

ಆ್ಯಂಕರ್ : ಗೃಹಲಕ್ಷ್ಮಿ ಸೇರಿದಂತೆ ಗ್ಯಾರಂಟಿ ಯೋಜನೆಗಳ ಮೂಲಕ ನೀಡಲಾಗುತ್ತಿರುವ ಹಣವನ್ನು ಕೆಲವರು ನಕಲಿ ಹಣಕಾಸು ಯೋಜನೆಗಳಿಗೆ ಬಳಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆದಿರುವ ಕೆಲವು ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿವೆ. ಗ್ರಾಮ ಪಂಚಾಯಿತಿ ಮಟ್ಟದಿಂದ ತಾಲ್ಲೂಕು ಪಂಚಾಯಿತಿ ಮಟ್ಟದವರೆಗೆ ಕಾರ್ಯನಿರ್ವಹಿಸುತ್ತಿರುವ ನಕಲಿ ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಗೃಹಲಕ್ಷ್ಮಿ ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತರಲಾಗಿದೆ. ಮಹಿಳೆಯರು ಕುಟುಂಬದ ಆಧಾರಸ್ತಂಭವಾಗಿದ್ದು, ಅವರ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಈ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದರು.

ಮಹಿಳೆಯರ ಮನೆಗಳು ಬೆಳಗಬೇಕು, ಅವರಿಗೆ ಆರ್ಥಿಕ ಭದ್ರತೆ ದೊರೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ಯೋಜನೆಗಳನ್ನು ಜಾರಿಗೊಳಿಸಿದ್ದು, ದುರುಪಯೋಗಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಎಚ್ಚರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande