ನಾಳೆ ಉಚಿತ ಕಿವಿ, ಮೂಗು, ಗಂಟಲು ಆರೋಗ್ಯ ತಪಾಸಣಾ ಶಿಬಿರ
ನಾಳೆ
Camp


ಬೆಂಗಳೂರು, 15 ಜೂನ್ (ಹಿ.ಸ.) :

ಆ್ಯಂಕರ್ : ಸಾರ್ವಜನಿಕರ ಆರೋಗ್ಯ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಪಿಸಿಎ ಚಾರಿಟೇಬಲ್ ಟ್ರಸ್ಟ್, ಆ್ಯಕ್ಟ್ ಆಫ್ ಲವ್, ಡಾ. ಅರ್ಚನಾ ಇಎನ್ಟಿ ಕೇರ್ ಸೆಂಟರ್ ಹಾಗೂ ನಂದನ ಕ್ಲಿನಿಕ್ ಸಹಯೋಗದಲ್ಲಿ ಉಚಿತ ಕಿವಿ, ಮೂಗು ಮತ್ತು ಗಂಟಲು ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಈ ಶಿಬಿರವು ನಾಳೆ, ಜೂನ್ 16, 2026ರಂದು (ಮಂಗಳವಾರ) ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಶಿಬಿರದಲ್ಲಿ ಕಿವಿ, ಮೂಗು ಮತ್ತು ಗಂಟಲು ಸಂಬಂಧಿತ ಆರೋಗ್ಯ ತಪಾಸಣೆಯ ಜೊತೆಗೆ ರಕ್ತದಲ್ಲಿನ ಸಕ್ಕರೆ ಅಂಶ, ರಕ್ತದೊತ್ತಡ (ಬಿಪಿ) ಹಾಗೂ ಹಿಮೋಗ್ಲೋಬಿನ್ ಪರೀಕ್ಷೆಗಳನ್ನೂ ನಡೆಸಲಾಗುತ್ತದೆ.

ಶಿಬಿರವು ಭುವನೇಶ್ವರಿ ನಗರದ ದಾಸರಹಳ್ಳಿ ಮುಖ್ಯ ರಸ್ತೆಯಲ್ಲಿರುವ ಡಾ. ಅರ್ಚನಾ ಇಎನ್ಟಿ ಕೇರ್ ಸೆಂಟರ್ನಲ್ಲಿ ನಡೆಯಲಿದ್ದು, ವೈದ್ಯರ ಸಲಹಾ ಶುಲ್ಕವನ್ನು ₹100 ನಿಗದಿಪಡಿಸಲಾಗಿದೆ.

ಚಿಕಿತ್ಸೆಗಿಂತ ತಡೆಗಟ್ಟುವಿಕೆ ಉತ್ತಮ ಎಂಬ ಧ್ಯೇಯದೊಂದಿಗೆ ಆಯೋಜಿಸಲಾಗುತ್ತಿರುವ ಈ ಆರೋಗ್ಯ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಪಿಸಿಎ ಚಾರಿಟೇಬಲ್ ಟ್ರಸ್ಟ್ನ ಸಿ.ಎಂ. ಸೈಮನ್ ಅವರನ್ನು 90350 30894 ಸಂಖ್ಯೆಯಲ್ಲಿ ಸಂಪರ್ಕಿಸಬಹುದು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande