ಹುಬ್ಬಳ್ಳಿ ಸಂಚಾರ ಪೊಲೀಸರಿಂದ ಶಾಲಾ ವಾಹನಗಳ ವಿಶೇಷ ತಪಾಸಣೆ
ಹುಬ್ಬಳ್ಳಿ, 15 ಜೂನ್ (ಹಿ.ಸ.) : ಆ್ಯಂಕರ್ : ಶಾಲಾ ಮಕ್ಕಳ ಸುರಕ್ಷತೆಯನ್ನು ಪ್ರಮುಖ ಆದ್ಯತೆಯಾಗಿ ಪರಿಗಣಿಸಿರುವ ಹುಬ್ಬಳ್ಳಿ ಉತ್ತರ ಸಂಚಾರ ಪೊಲೀಸ್ ಠಾಣೆಯ ಟ್ರಾಫಿಕ್ ಪೊಲೀಸರು, ಶಾಲಾ ವಾಹನಗಳ ಮೇಲೆ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದರು. ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯುವ ಆಟೋ, ವ್ಯಾನ
Police drive


ಹುಬ್ಬಳ್ಳಿ, 15 ಜೂನ್ (ಹಿ.ಸ.) :

ಆ್ಯಂಕರ್ : ಶಾಲಾ ಮಕ್ಕಳ ಸುರಕ್ಷತೆಯನ್ನು ಪ್ರಮುಖ ಆದ್ಯತೆಯಾಗಿ ಪರಿಗಣಿಸಿರುವ ಹುಬ್ಬಳ್ಳಿ ಉತ್ತರ ಸಂಚಾರ ಪೊಲೀಸ್ ಠಾಣೆಯ ಟ್ರಾಫಿಕ್ ಪೊಲೀಸರು, ಶಾಲಾ ವಾಹನಗಳ ಮೇಲೆ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದರು.

ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯುವ ಆಟೋ, ವ್ಯಾನ್ ಹಾಗೂ ಬಸ್ಗಳ ದಾಖಲಾತಿಗಳನ್ನು ಪರಿಶೀಲಿಸುವ ಮೂಲಕ ಸುರಕ್ಷಿತ ಸಂಚಾರಕ್ಕೆ ಒತ್ತು ನೀಡಿದರು.

ಪ್ರತಿದಿನ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಸಾಗಿಸುವ ವಾಹನಗಳನ್ನು ತಡೆದು ಚಾಲಕರ ದಾಖಲೆಗಳನ್ನು ಪರಿಶೀಲಿಸಿದ ಪೊಲೀಸರು, ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಡ್ರಿಂಕ್ ಅಂಡ್ ಡ್ರೈವ್ ಪರೀಕ್ಷೆಯನ್ನೂ ನಡೆಸಿದರು. ಜೊತೆಗೆ ಚಾಲನಾ ಪರವಾನಗಿ, ವಾಹನ ನೋಂದಣಿ ಪ್ರಮಾಣಪತ್ರ, ವಿಮೆ ಸೇರಿದಂತೆ ಅಗತ್ಯ ದಾಖಲೆಗಳ ಸಿಂಧುತ್ವವನ್ನು ಪರಿಶೀಲಿಸಿದರು.

ಶಾಲಾ ವಾಹನಗಳಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆ ಅತ್ಯಂತ ಮಹತ್ವದ್ದಾಗಿರುವುದರಿಂದ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ನಿಯಮ ಉಲ್ಲಂಘನೆಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಎಚ್ಚರಿಕೆ ನೀಡಿದರು. ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande