ಪ್ರಧಾನ ಸೇವೆಯಲ್ಲಿ 12 ವರ್ಷಗಳ ಐತಿಹಾಸಿಕ ಮೈಲುಗಲ್ಲು ; ಪ್ರಧಾನಿ ನರೇಂದ್ರ ಮೋದಿ ಅವರ 4,399 ದಿನಗಳ ಜನಸೇವೆಯ ದಾಖಲೆ
ಬಾಗಲಕೋಟೆ, 16 ಜೂನ್ (ಹಿ.ಸ.) : ಆಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ದೇಶದ ಜನತೆಗೆ ಸಲ್ಲಿಸುತ್ತಿರುವ ನಿರಂತರ ಸೇವೆಗೆ 12 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ, ಅವರ ಆಡಳಿತಾವಧಿಯ ಸಾಧನೆಗಳು, ಅಭಿವೃದ್ಧಿ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳ ಕುರಿತು ಬಾಗಲಕೋಟೆಯಲ್ಲಿ ಪತ್ರಿಕಾಗ
Sabhe


ಬಾಗಲಕೋಟೆ, 16 ಜೂನ್ (ಹಿ.ಸ.) :

ಆಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ದೇಶದ ಜನತೆಗೆ ಸಲ್ಲಿಸುತ್ತಿರುವ ನಿರಂತರ ಸೇವೆಗೆ 12 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ, ಅವರ ಆಡಳಿತಾವಧಿಯ ಸಾಧನೆಗಳು, ಅಭಿವೃದ್ಧಿ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳ ಕುರಿತು ಬಾಗಲಕೋಟೆಯಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿಗಳ ಪೈಕಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದು, 4,399 ದಿನಗಳ ಕಾಲ ದೇಶದ ಅಭಿವೃದ್ಧಿ, ಭದ್ರತೆ ಹಾಗೂ ಜನಕಲ್ಯಾಣಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು, ಮೂಲಸೌಕರ್ಯ ಅಭಿವೃದ್ಧಿ, ರೈತರು, ಬಡವರು, ಮಹಿಳೆಯರು ಹಾಗೂ ಯುವಜನರಿಗಾಗಿ ಜಾರಿಗೊಳಿಸಿದ ಹಲವು ಕಾರ್ಯಕ್ರಮಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿವರಿಸಲಾಯಿತು.

ದೇಶದ ಪ್ರಗತಿಗೆ ಹೊಸ ದಿಕ್ಕು ನೀಡುವ ಹಲವು ಮಹತ್ವದ ನಿರ್ಧಾರಗಳನ್ನು ಪ್ರಧಾನಿ ಮೋದಿ ಅವರ ನೇತೃತ್ವದ ಸರ್ಕಾರ ಕೈಗೊಂಡಿದೆ ಎಂದು ಮುಖಂಡರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸದರಾದ ಪಿ. ಸಿ. ಗದ್ದಿಗೌಡರ, ರಾಜ್ಯಸಭಾ ಸದಸ್ಯರಾದ ನಾರಾಯಣಸಾ ಭಾಂಡಗೆ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಮಲ್ಲಯ್ಯ ಮೂಗನಕರಮಠ, ಹೂವಪ್ಪ ರಾಠೋಡ, ಬಸವರಾಜ ಯಂಕಂಚಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande