
ಗದಗ, 16 ಜೂನ್ (ಹಿ.ಸ.) :
ಆ್ಯಂಕರ್ : ಪೌರಾಡಳಿತ ನಿರ್ದೇಶನಾಲಯ, ಬೆಂಗಳೂರು ಅವರ ನಿರ್ದೇಶನದಂತೆ, ಗದಗ ಜಿಲ್ಲೆ ರೋಣ ಪುರಸಭೆಯಲ್ಲಿ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಅವಧಿಗೆ ಕೌಶಲ್ಯ ಹಾಗೂ ಸಾಮರ್ಥ್ಯ ವೃದ್ಧಿಪಡಿಸುವ ಉದ್ದೇಶದಿಂದ ಮಾತ್ರ ಈ ಅರ್ಜಿ ಕರೆಯಲಾಗಿದ್ದು, ಖಾಯಂ ನೇಮಕಾತಿಗೆ ಯಾವುದೇ ಅವಕಾಶ ಇರುವುದಿಲ್ಲ.
ಆಸಕ್ತ ಅಭ್ಯರ್ಥಿಗಳು ಜೂನ್ 24ರೊಳಗಾಗಿ ಸಂಬಂಧಿತ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಬೇಕು. ತಾತ್ಕಾಲಿಕವಾಗಿ ಪರೀಕ್ಷಾರ್ಥ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಕಚೇರಿಯಿಂದ ಪ್ರಮಾಣಪತ್ರ ನೀಡಲಾಗುವುದು.
ಇದು ಕೇವಲ ತಾತ್ಕಾಲಿಕ ತರಬೇತಿ (ಇಂಟರ್ನ್ಶಿಪ್) ಕಾರ್ಯಕ್ರಮವಾಗಿದ್ದು, ಯಾವುದೇ ಶಾಶ್ವತ ಉದ್ಯೋಗದ ಭರವಸೆ ಇರುವುದಿಲ್ಲ. ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ರೋಣ ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP