
ಬೆಂಗಳೂರು, 16 ಜೂನ್ (ಹಿ.ಸ.):
ಆ್ಯಂಕರ್ : ಬಿಡದಿ ಸಮೀಪ ಟೌನ್ಶಿಪ್ ನಿರ್ಮಾಣ ಯೋಜನೆಗೆ ವಿರೋಧ ವ್ಯಕ್ತಪಡಿಸಿ ರೈತರು ನಡೆಸುತ್ತಿರುವ ಹೋರಾಟದ ನಡುವೆಯೇ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ಬಿಜೆಪಿ ಮುಖಂಡರ ನಿಯೋಗವು ಬುಧವಾರ ಹೋರಾಟ ನಡೆಯುತ್ತಿರುವ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಲು ಮುಂದಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ ಬಿಜೆಪಿ, ನಿಯೋಗವು ಬೆಳಗ್ಗೆ 11 ಗಂಟೆಗೆ ಕೆಂಪಯ್ಯನಪಾಳ್ಯ, ಅರಳಾಳುಸಂದ್ರ, ಹೊಸೂರು ಹಾಗೂ ಬನ್ನಿಗಿರಿ ಗ್ರಾಮಗಳಿಗೆ ಭೇಟಿ ನೀಡಲಿದೆ. ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ, ಟೌನ್ಶಿಪ್ ಯೋಜನೆಯಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲಿದೆ.
ನಿಯೋಗದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ, ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.