ಬಳ್ಳಾರಿ : ಜೂ.19 ರಂದು ಉದ್ಯೋಗ ಸಂದರ್ಶನ
ಬಳ್ಳಾರಿ, 16 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್ ಕಂಪನಿ ಇವರ ಜಂಟಿ ಆಶ್ರಯದಲ್ಲಿ ಜೂನ್ 19 ರ ಶುಕ್ರವಾರಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ. ಸಂದರ್ಶನ ನಡೆಯುವ ಸ್ಥಳ: ಆದಿತ
ಬಳ್ಳಾರಿ : ಜೂ.19 ರಂದು ಉದ್ಯೋಗ ಸಂದರ್ಶನ


ಬಳ್ಳಾರಿ, 16 ಜೂನ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್ ಕಂಪನಿ ಇವರ ಜಂಟಿ ಆಶ್ರಯದಲ್ಲಿ ಜೂನ್ 19 ರ ಶುಕ್ರವಾರಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ.

ಸಂದರ್ಶನ ನಡೆಯುವ ಸ್ಥಳ: ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್ ಕಚೇರಿ, 2ನೇ ಮಹಡಿ, ಅಯ್ಯಪ್ಪನ್ ಡು-ಟವರ್, ಎಂಐಜಿ -3 ಕೆಹೆಚ್ಬಿ ಕಾಲೋನಿ, ಪಾರ್ವತಿ ನಗರ, ಕೆಎಫ್ಸಿ ಕಚೇರಿ ಎದುರು, ಬಳ್ಳಾರಿ - 583103.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ಪಿಯುಸಿ ಅಥವಾ ಯಾವುದೇ ಪದವಿ ಉತ್ತೀರ್ಣರಾದವರು ಭಾಗವಹಿಸಬಹುದು. ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಸ್ವ-ವಿವರಗಳ ಮಾಹಿತಿ ಪ್ರತಿ ಹಾಗೂ ಆಧಾರ್ ಕಾರ್ಡ್ ನಕಲು ಪ್ರತಿಯೊಂದಿಗೆ ಹಾಜರಾಗಬೇಕು.

ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ 7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande