
ವಿಜಯಪುರ, 16 ಜೂನ್ (ಹಿ.ಸ.) :
ಆಂಕರ್ : ವಿಜಯಪುರದಿಂದ ಪಂಡರಾಪುರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ ಆದ ಟ್ರ್ಯಾಕ್ಟರ್ವೊಂದು ಮುಂದ ಸಾಗುತ್ತಿದ್ದ ಟ್ರ್ಯಾಕ್ಟರ್ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಒಟ್ಟು ಆರು ಟ್ರ್ಯಾಕ್ಟರ್ಗಳು ಹಾನಿಗೊಳಗಾಗಿವೆ.
ಬಾಲಗಾಂವ ಗ್ರಾಮದ ಮುಂದಿನ ಭಾಗದಲ್ಲಿ ಈ ಘಟನೆ ನಡೆದಿದ್ದು, ಹೊಸದಾಗಿ ಖರೀದಿಸಿದ ಟ್ರ್ಯಾಕ್ಟರ್ಗಳನ್ನು ಸಾಲಾಗಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಟ್ರ್ಯಾಕ್ಟರ್ನ ಬ್ರೇಕ್ ಏಕಾಏಕಿ ಕೈಕೊಟ್ಟಿದೆ. ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಮುಂದೆ ಸಾಗುತ್ತಿದ್ದ ಟ್ರ್ಯಾಕ್ಟರ್ಗೆ ಬಲವಾಗಿ ಡಿಕ್ಕಿ ಹೊಡೆದಿದ್ದು, ಅದರ ಪರಿಣಾಮ ಸರಣಿ ಡಿಕ್ಕಿ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಆರು ಟ್ರ್ಯಾಕ್ಟರ್ಗಳು ಜಖಂಗೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದರು.
ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಬಳಿಕ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಸಂಬಂಧಪಟ್ಟವರು ಪರಿಶೀಲನೆ ನಡೆಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande