ಬಿಟಿಡಿಎ ಅಧಿಕಾರಿಗೆ ಚಪ್ಪಲಿಯಿಂದ ಹಲ್ಲೆ ಪ್ರಕರಣ ; ರೈತ ಬಸಪ್ಪ ದೊಡಮನಿ ವಿರುದ್ಧ ಪೊಲೀಸ್ ಪ್ರಕರಣ
ಬಾಗಲಕೋಟೆ, 16 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ನಗರದಲ್ಲಿ ಬಿಟಿಡಿಎ (ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ) ಅಧಿಕಾರಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ರೈತ ಬಸಪ್ಪ ದೊಡಮನಿ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿದ್
ಪೊಲೀಸರು


ಬಾಗಲಕೋಟೆ, 16 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ನಗರದಲ್ಲಿ ಬಿಟಿಡಿಎ (ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ) ಅಧಿಕಾರಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ರೈತ ಬಸಪ್ಪ ದೊಡಮನಿ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿದ್ದಾರ್ಥ್ ಗೋಯಲ್ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಸ್ಪಿ ಅವರು, ಈ ಘಟನೆಗೆ ಸಂಬಂಧಿಸಿದಂತೆ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದರು.

ಪ್ರಾಥಮಿಕ ತನಿಖೆಯಲ್ಲಿ ಪ್ರಕರಣದಲ್ಲಿ ಓರ್ವ ಆರೋಪಿಯ ಪಾತ್ರ ಇರುವುದು ಕಂಡುಬಂದಿದೆ. ಘಟನೆಗೆ ಸಂಬಂಧಿಸಿದ ಎಲ್ಲಾ ಆಯಾಮಗಳಲ್ಲಿಯೂ ಪರಿಶೀಲನೆ ನಡೆಸಲಾಗುತ್ತಿದ್ದು, ತನಿಖೆಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಬಿಟಿಡಿಎ ಅಧಿಕಾರಿಯ ಮೇಲೆ ನಡೆದ ಈ ದಾಳಿಯ ಘಟನೆ ಆಡಳಿತ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಸರ್ಕಾರಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸುವ ಯಾವುದೇ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಈ ನಡುವೆ, ಪ್ರಕರಣದ ತನಿಖೆ ಪೂರ್ಣಗೊಂಡ ಬಳಿಕ ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ಹಾಗೂ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande