
ಬೆಂಗಳೂರು, 16 ಜೂನ್ (ಹಿ.ಸ.) :
ಆ್ಯಂಕರ್ : ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಹಯೋಗದಲ್ಲಿ ಎಚ್.ಪಿ.ವಿ ಲಸಿಕಾ ಅಭಿಯಾನ–2026 ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ಅಮೃತ ಹಳ್ಳಿ ಆರೋಗ್ಯ ಕೇಂದ್ರದಲ್ಲಿ ಅರ್ಹ ಬಾಲಕಿಯರಿಗೆ ಉಚಿತ ಎಚ್.ಪಿ.ವಿ ಲಸಿಕೆ ನೀಡಲಾಗುತ್ತಿದೆ. 14 ವರ್ಷ ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರು ಈ ಲಸಿಕೆಯ ಪ್ರಯೋಜನ ಪಡೆಯಬಹುದಾಗಿದೆ.
ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಎಚ್.ಪಿ.ವಿ ಲಸಿಕೆ ಗರ್ಭಕಂಠದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಕಾರಿಯಾಗಿದ್ದು, ಸುರಕ್ಷಿತ ಹಾಗೂ ಪರಿಣಾಮಕಾರಿ ರಕ್ಷಣೆಯನ್ನು ಒದಗಿಸುತ್ತದೆ. ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಈ ಲಸಿಕೆ ಉಚಿತವಾಗಿ ಲಭ್ಯವಿದೆ.
ಪೋಷಕರು ತಮ್ಮ ಮಕ್ಕಳನ್ನು ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆತಂದು ಲಸಿಕೆ ಹಾಕಿಸುವ ಮೂಲಕ ಗರ್ಭಕಂಠದ ಕ್ಯಾನ್ಸರ್ ವಿರುದ್ಧ ರಕ್ಷಣೆ ಒದಗಿಸಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.
ಇಂದೇ ಅಮೃತ ಹಳ್ಳಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಎಚ್.ಪಿ.ವಿ ಲಸಿಕೆ ಹಾಕಿಸಿಕೊಳ್ಳಿ. ಆರೋಗ್ಯಕರ ಭವಿಷ್ಯಕ್ಕಾಗಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.