ಭಾರಿ ಮಳೆ, ಗಾಳಿಗೆ ಚಿಕ್ಕಪಡಸಲಗಿ ಬಳಿ ಮರಗಳು ಧರೆಗೆ, ಜಮಖಂಡಿ–ವಿಜಯಪುರ ರಸ್ತೆ ಸಂಚಾರ ಕೆಲಕಾಲ ಸ್ಥಗಿತ
ಬಾಗಲಕೋಟೆ, 16 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಬಳಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯ ಪರಿಣಾಮ ರಸ್ತೆ ಬದಿಯಲ್ಲಿದ್ದ ಹಲವು ಮರಗಳು ಉರುಳಿ ಬಿದ್ದಿದ್ದು, ಜಮಖಂಡಿ–ವಿಜಯಪುರ ಮುಖ್ಯ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವ
ಹಾನಿ


ಬಾಗಲಕೋಟೆ, 16 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಬಳಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯ ಪರಿಣಾಮ ರಸ್ತೆ ಬದಿಯಲ್ಲಿದ್ದ ಹಲವು ಮರಗಳು ಉರುಳಿ ಬಿದ್ದಿದ್ದು, ಜಮಖಂಡಿ–ವಿಜಯಪುರ ಮುಖ್ಯ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತು.

ಅಕಸ್ಮಾತ್ ಬೀಸಿದ ಭಾರಿ ಗಾಳಿಗೆ ಮರಗಳ ಕೊಂಬೆಗಳು ಮುರಿದು ರಸ್ತೆಗೆ ಬಿದ್ದ ಪರಿಣಾಮ ವಾಹನಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಯಿತು. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ಮರಗಳು ಬಿದ್ದಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ವಾಹನ ಸವಾರರು ರಸ್ತೆ ತೆರವು ಕಾರ್ಯಕ್ಕೆ ಮುಂದಾದರು. ಬಳಿಕ ಸಂಬಂಧಪಟ್ಟ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ರಸ್ತೆಗೆ ಬಿದ್ದಿದ್ದ ಮರಗಳ ಕೊಂಬೆಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು.

ಮಳೆ-ಗಾಳಿಯ ಅಬ್ಬರದಿಂದ ಗ್ರಾಮೀಣ ಪ್ರದೇಶಗಳಲ್ಲಿ ಮರಗಳು, ವಿದ್ಯುತ್ ಕಂಬಗಳು ಸೇರಿದಂತೆ ಸಾರ್ವಜನಿಕ ಆಸ್ತಿಗಳಿಗೆ ಹಾನಿಯಾಗಿರುವ ಸಾಧ್ಯತೆಗಳಿದ್ದು, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಜಮಖಂಡಿ–ವಿಜಯಪುರ ಪ್ರಮುಖ ಸಂಪರ್ಕ ರಸ್ತೆಯಾಗಿರುವುದರಿಂದ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ರಸ್ತೆ ಮೇಲೆ ಮರಗಳು ಬಿದ್ದ ಪರಿಣಾಮ ಪ್ರಯಾಣಿಕರು ಕೆಲಕಾಲ ತೊಂದರೆ ಅನುಭವಿಸಿದರು. ಯಾವುದೇ ದೊಡ್ಡ ಅನಾಹುತ ಸಂಭವಿಸದಿರುವುದು ಸಮಾಧಾನದ ಸಂಗತಿಯಾಗಿದೆ.

ಮಳೆಗಾಲದ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande