ಜೂನ್ 16 : ಕೊಪ್ಪಳ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ
ಕೊಪ್ಪಳ, 16 ಜೂನ್ (ಹಿ.ಸ.) ಆ್ಯಂಕರ್ : 2026-27 ನೇ ಸಾಲಿನಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಯುಷ್ ಇಲಾಖೆ ಮತ್ತು ಯುವ ಜನ ಸೇವೆ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಜೂನ್ 16 ರಂದು ಜಿಲ್ಲಾ ಕ್ರೀಡಾಂಗಣ ಕೊಪ್ಪಳ ಆವರಣದಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಗಳನ್ನು ಆಯೋಜಿಸಲಾಗ
ಜೂನ್ 16 : ಕೊಪ್ಪಳ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ


ಕೊಪ್ಪಳ, 16 ಜೂನ್ (ಹಿ.ಸ.)

ಆ್ಯಂಕರ್ : 2026-27 ನೇ ಸಾಲಿನಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಯುಷ್ ಇಲಾಖೆ ಮತ್ತು ಯುವ ಜನ ಸೇವೆ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಜೂನ್ 16 ರಂದು ಜಿಲ್ಲಾ ಕ್ರೀಡಾಂಗಣ ಕೊಪ್ಪಳ ಆವರಣದಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಸ್ಪರ್ಧೆಗೆ 8 ವರ್ಷ ಮೇಲ್ಪಟ್ಟವರು ಭಾಗವಹಿಸಬಹುದು. ಪ್ರತ್ಯೇಕವಾಗಿ ವಯಸ್ಸಿಗೆ ಅನುಗುಣವಾಗಿ ಸ್ಪರ್ಧೆಗಳನ್ನು ಆಯೋಜನೆ ಮಾಡಿದ್ದು ಯೋಗ ಸ್ಪರ್ಧೆಗೆ 8-12 ವರ್ಷ, 13-16 ವರ್ಷ, 17-25 ವರ್ಷ, 26-45 ವರ್ಷ, 46 ವರ್ಷ ಮೇಲ್ಪಟ್ಟು ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ವಿಭಾಗಗಳಾಗಿ ಸ್ಪರ್ಧೆ ಆಯೋಜನೆ ಮಾಡಿದ್ದು, ಉಚಿತ ಪ್ರವೇಶವಿರುತ್ತದೆ. ಭಾಗವಹಿಸಿದ ಎಲ್ಲರಿಗೂ ಪ್ರಮಾಣಪತ್ರವನ್ನು ವಿತರಿಸಲಾಗುತ್ತದೆ.

ಪ್ರವೇಶಕ್ಕಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ಯೋಗ ತರಬೇತುದಾರರಾದ ಲೋಕೇಶ ಲಮಾಣಿ: 7892920462, ಬಸವರಾಜ ನೀರಗಂಟಿ: 9743111623, ರೇಷ್ಮಾ ವಡ್ಡಟ್ಟಿ: 9148424598 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಪರ್ವತಗೌಡ ಬಿ.ಹಿರೇಗೌಡರ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande