
ಕೋಲಾರ, ೧೬ ಜೂನ್ (ಹಿ.ಸ) :
ಆ್ಯಂಕರ್ : ಕಾಮಸಮುದ್ರಂ ಪೊಲೀಸರು ಮನೆ ಕಳವು ಪ್ರಕರಣದಲ್ಲಿ ಓರ್ವ ಅಂತರ ರಾಜ್ಯ ಆರೋಪಿಯನ್ನು ಬಂಧಿಸಿ, ಆತನಿಂದ ಸುಮಾರು ಏಳು ಲಕ್ಷ ಮೌಲ್ಯದ ಚಿನ್ನದ ಆಭರಣಗಳು ಹಾಗೂ ಒಂದು ದ್ವಿಚಕ್ರವಾಹವನ್ನು ವಶಪಡಿಸಿಕೊಂಡಿದ್ದಾರೆ.
ಏಪ್ರಿಲ್ ೦೪ ರಂದು ಕುಂದರಸನಹಳ್ಳಿ ಗ್ರಾಮದ ಕೆ.ವಿ ಉಮಾಪತಿ ರವರು ತಮ್ಮ ಮನೆಯಲ್ಲಿ ೫೦೦ ಗ್ರಾಂ ಬೆಳ್ಳಿ ಆಭರಣಗಳು ಮತ್ತು ರೂ.೪೦೦೦/- ನಗದು ಹಣ ಕಳ್ಳತನವಾಗಿರುವ ಬಗ್ಗೆ ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಪ್ರಕರಣದಲ್ಲಿ ಆರೋಪಿ ಮತ್ತು ಮಾಲನ್ನು ಪತ್ತೆಮಾಡಲು ಕಾಮಸಮುದ್ರಂ ವೃತ್ತ ಕಛೇರಿ ಪ್ರಭಾರ ಸಿಪಿಐ ಹರೀಶ್. ಆರ್ ರವರ ನೇತೃತ್ವದಲ್ಲಿ ಪಿಎಸ್ಐ ಬಿ.ವಿ.ಕಿರಣ್ಕುಮಾರ್ ಮತ್ತು ಸಿಬ್ಬಂದಿಯವರನ್ನೊಳಗೊ0ಡ0ತೆ ವಿಶೇಷ ಅಪರಾಧ ಪತ್ತೆ ದಳವನ್ನು ರಚನೆ ಮಾಡಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು ತಮಿಳುನಾಡು ರಾಜ್ಯದ ಕೃಷ್ಣಗಿರಿಜಿಲ್ಲೆಯ ವೆಂಕಟಾಪುರ ಗ್ರಾಮದ ವಾಸಿ ತರುಣ್ ಎಂಬುವನನ್ನು ಬಂಧಿಸಿ ಕಳುವಾದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಮಸಮುದ್ರ ಅಲ್ಲದೆ ಇತರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳುವು ಮಾಡಲಾಗಿದ್ದ ಚಿನ್ನ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಮತ್ತು ಮಾಲನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾದ ಕಾಮಸಮುದ್ರಂ ಪಿ.ಎಸ್.ಐ ಬಿ.ವಿ.ಕಿರಣ್ಕುಮಾರ್ ಮತ್ತು ಸಿಬ್ಬಂದಿಯವರಾದ ಮಂಜುನಾಥರೆಡ್ಡಿ, ರಾಮಕೃಷ್ಣರೆಡ್ಡಿ, ಮುನಾವರ್ ಪಾಷ, ರಾಮರಾವ್, ಮಂಜುನಾಥ, ಲಕ್ಷö್ಮಣತೇಲಿ ಹಾಗೂ ಜೀಪ್ ಚಾಲಕ ಗುರುಮೂರ್ತಿ ರವರ ಉತ್ತಮ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಪ್ರಶಂಶಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್