ರಾಂಪುರದಲ್ಲಿ ಎಸ್ಸಿ-ಎಸ್ಟಿ ಕುಂದು ಕೊರತೆ ಸಭೆ ; ಪೊಲೀಸ್ ಅಧಿಕಾರಿಗಳಿಂದ ಮುಖಂಡರ ಅಹವಾಲು ಆಲಿಕೆ
ವಿಜಯಪುರ, 16 ಜೂನ್ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಂಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಮುಖಂಡರಿಗಾಗಿ ವಿಶೇಷ ಕುಂದು ಕೊರತೆ ಸಭೆಯನ್ನು ಆಯೋಜಿಸಲಾಯಿತು. ಸಭೆಗೆ ಆಗಮಿಸಿದ ವಿವಿಧ ಸಮುದಾಯಗಳ ಮುಖಂಡರು ಹಾಗೂ ಗಣ್ಯರನ್ನು
Sabhe


ವಿಜಯಪುರ, 16 ಜೂನ್ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಂಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಮುಖಂಡರಿಗಾಗಿ ವಿಶೇಷ ಕುಂದು ಕೊರತೆ ಸಭೆಯನ್ನು ಆಯೋಜಿಸಲಾಯಿತು.

ಸಭೆಗೆ ಆಗಮಿಸಿದ ವಿವಿಧ ಸಮುದಾಯಗಳ ಮುಖಂಡರು ಹಾಗೂ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡ ಪೊಲೀಸ್ ಅಧಿಕಾರಿಗಳು, ಅವರ ಸಮಸ್ಯೆಗಳು, ಬೇಡಿಕೆಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳನ್ನು ಆಲಿಸಿದರು.

ಸಭೆಯಲ್ಲಿ ಗ್ರಾಮೀಣ ಭಾಗದಲ್ಲಿ ಎದುರಾಗುತ್ತಿರುವ ವಿವಿಧ ಸಮಸ್ಯೆಗಳು, ಕಾನೂನು ಸುವ್ಯವಸ್ಥೆ, ಸಾಮಾಜಿಕ ಸೌಹಾರ್ದತೆ ಕಾಪಾಡುವಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಿತು. ಸಮುದಾಯದ ಜನರು ತಮ್ಮ ಅಹವಾಲುಗಳನ್ನು ಮುಕ್ತವಾಗಿ ಹಂಚಿಕೊಂಡಿದ್ದು, ಅವುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಲಾಯಿತು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಹಕ್ಕುಗಳ ರಕ್ಷಣೆ, ಅವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸದಾ ಬದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿ ಸಹಕಾರ ನೀಡುವಂತೆ ಮನವಿ ಮಾಡಲಾಯಿತು.

ಸಭೆಯಲ್ಲಿ ಪೊಲೀಸ್ ಸಿಬ್ಬಂದಿ, ಗ್ರಾಮ ಮುಖಂಡರು ಹಾಗೂ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande