ರಾಂಗ್ ಸೈಡ್ ಬಂದ ಟಿಪ್ಪರ್ ಅಟ್ಟಹಾಸಕ್ಕೆ ಇಬ್ಬರು ಬಲಿ ; ಬೈಕ್ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ
ವಿಜಯಪುರ, 16 ಜೂನ್ (ಹಿ.ಸ.) : ಆಂಕರ್ : ರಾಂಗ್ ಸೈಡ್ನಲ್ಲಿ ಬಂದ ಟಿಪ್ಪರ್ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ರಸ್ತೆ ಅಪಘಾತ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಮರಗೂರ ಸಕ್ಕರೆ ಕಾರ್ಖಾನೆ ಎದುರು ಮಂಗಳವಾರ ನಡೆದಿದೆ. ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಇಂ
ಅಪಘಾತ


ವಿಜಯಪುರ, 16 ಜೂನ್ (ಹಿ.ಸ.) :

ಆಂಕರ್ : ರಾಂಗ್ ಸೈಡ್ನಲ್ಲಿ ಬಂದ ಟಿಪ್ಪರ್ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ರಸ್ತೆ ಅಪಘಾತ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಮರಗೂರ ಸಕ್ಕರೆ ಕಾರ್ಖಾನೆ ಎದುರು ಮಂಗಳವಾರ ನಡೆದಿದೆ.

ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಗೋರನಾಳ ಗ್ರಾಮದ ನಿವಾಸಿಗಳಾದ ಧರ್ಮಣ್ಣ ಹೊಸಮನಿ ಹಾಗೂ ಭೀರಪ್ಪ ಪೂಜಾರಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಬೈಕ್ ಸವಾರ ಸೋಮಯ್ಯ ಹಿರೇಮಠ ಗಾಯಗೊಂಡಿದ್ದು, ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿಯ ಪ್ರಕಾರ, ತೆಲಂಗಾಣ ನೋಂದಣಿ ಸಂಖ್ಯೆಯ TS 15 UD 3836 ಟಿಪ್ಪರ್ ವಾಹನದ ಚಾಲಕ ರಾಂಗ್ ಸೈಡ್ನಿಂದ ಅತಿವೇಗವಾಗಿ ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ KA 28 HQ 4724 ಸಂಖ್ಯೆಯ ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಸವಾರರಾದ ಧರ್ಮಣ್ಣ ಹೊಸಮನಿ ಹಾಗೂ ಭೀರಪ್ಪ ಪೂಜಾರಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಅಪಘಾತದ ಕುರಿತು ತನಿಖೆ ಆರಂಭಿಸಲಾಗಿದೆ.

ಈ ಸಂಬಂಧ ಝಳಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಟಿಪ್ಪರ್ ಚಾಲಕನ ನಿರ್ಲಕ್ಷ್ಯದ ಚಾಲನೆ ಕುರಿತು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ರಸ್ತೆ ಸುರಕ್ಷತೆ ನಿಯಮಗಳ ಉಲ್ಲಂಘನೆ ಹಾಗೂ ಅಜಾಗರೂಕ ಚಾಲನೆಯಿಂದ ಮತ್ತೊಂದು ಕುಟುಂಬ ದುಃಖದಲ್ಲಿ ಮುಳುಗಿದ್ದು, ವಾಹನ ಚಾಲಕರು ಎಚ್ಚರಿಕೆಯಿಂದ ಸಂಚರಿಸುವ ಅಗತ್ಯವಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande