
ವಿಜಯಪುರ, 16 ಜೂನ್ (ಹಿ.ಸ.) :
ಆಂಕರ್ : ಟೈರ್ ಬ್ಲಾಸ್ಟ್ನಿಂದ ನಿಯಂತ್ರಣ ತಪ್ಪಿದ ಟಿಪ್ಪರ್ ಹಾಗೂ ಸರ್ಕಾರಿ ಬಸ್ ನಡುವೆ ಭೀಕರ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ನಡೆದಿದೆ.
ಅಪಘಾತದ ತೀವ್ರತೆಗೆ ವಾಹನಗಳು ಜಖಂಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮೃತರನ್ನು ಟಿಪ್ಪರ್ ಚಾಲಕ ಅಶೋಕ್ ಉಟಗಿ, ಅವರ ಪತ್ನಿ ರಾಧಾಬಾಯಿ ಹಾಗೂ ಸರ್ಕಾರಿ ಬಸ್ ಚಾಲಕ ಹನುಮಂತ ಛಲವಾದಿ ಎಂದು ಗುರುತಿಸಲಾಗಿದೆ.
ಟಿಪ್ಪರ್ನ ಟೈರ್ ಏಕಾಏಕಿ ಬ್ಲಾಸ್ಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಸರ್ಕಾರಿ ಬಸ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಟಿಪ್ಪರ್ ಮತ್ತು ಬಸ್ನ ಮುಂಭಾಗ ಸಂಪೂರ್ಣ ಹಾನಿಗೊಳಗಾಗಿದ್ದು, ಟಿಪ್ಪರ್ನಲ್ಲಿದ್ದವರು ಹಾಗೂ ಬಸ್ನಲ್ಲಿದ್ದ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಸುಮಾರು 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಚಡಚಣ ಪೊಲೀಸ್ ಠಾಣೆಯ ಪಿಎಸ್ಐ ಸೊಮೇಶ ಗೆಜ್ಜಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಈ ಭೀಕರ ಅಪಘಾತದಿಂದ ಲೋಣಿ ಕ್ರಾಸ್ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರಸ್ತೆ ಸುರಕ್ಷತೆ ಹಾಗೂ ವಾಹನಗಳ ತಾಂತ್ರಿಕ ತಪಾಸಣೆಯ ಅಗತ್ಯದ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳು ಎದ್ದಿವೆ.
ಹಿಂದೂಸ್ತಾನ್ ಸಮಾಚಾರ್ / jyothi deshpande