ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಜೂ.30 ರಂದು ಬಳ್ಳಾರಿಗೆ
ಬಳ್ಳಾರಿ, 16 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಅವರು ಜೂನ್ 30 ರ ಮಂಗಳವಾರ ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜೂ 30ರ ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ನಗರದ ಹಿಂದುಳಿದ ಹಾಗೂ ಕೊಳಚೆ ಪ್ರದೇಶಗಳಲ್ಲಿರುವ
ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಜೂ.30 ರಂದು ಬಳ್ಳಾರಿಗೆ


ಬಳ್ಳಾರಿ, 16 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಅವರು ಜೂನ್ 30 ರ ಮಂಗಳವಾರ ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಜೂ 30ರ ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ನಗರದ ಹಿಂದುಳಿದ ಹಾಗೂ ಕೊಳಚೆ ಪ್ರದೇಶಗಳಲ್ಲಿರುವ ಅಂಗನವಾಡಿ ಮತ್ತು ಉರ್ದು ಶಾಲೆಗಳಿಗೆ ಅಧ್ಯಕ್ಷರು ಭೇಟಿ ನೀಡಿ ಪರಿಶೀಲಿಸುವರು.

ಬಳಿಕ ಮಧ್ಯಾಹ್ನ 12 ಗಂಟೆಗೆ ಬಳ್ಳಾರಿ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕುಂದು ಕೊರತೆಗಳ ವಿಚಾರಣಾ ಸಭೆ ನಡೆಸುವರು.

ಮಧ್ಯಾಹ್ನ 03 ಗಂಟೆಗೆ ಬಳ್ಳಾರಿಯ ಅನಂತಪುರ ರಸ್ತೆಯಲ್ಲಿರುವ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande