ಮೋದಿ ಸರ್ಕಾರದ 12 ವರ್ಷಗಳ ಅಭಿವೃದ್ಧಿ ಪಯಣ : ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ಸಂವಾದ
ವಿಜಯಪುರ, 17 ಜೂನ್ (ಹಿ.ಸ.) : ಆಂಕರ್ : ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಕಳೆದ 12 ವರ್ಷಗಳಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳ ಕುರಿತು ವಿಜಯಪುರದಲ್ಲಿ ಮಾಧ್ಯಮ ಸ್ನೇಹಿತರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಸದರಾ
ಸಂವಾದ


ವಿಜಯಪುರ, 17 ಜೂನ್ (ಹಿ.ಸ.) :

ಆಂಕರ್ : ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಕಳೆದ 12 ವರ್ಷಗಳಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳ ಕುರಿತು ವಿಜಯಪುರದಲ್ಲಿ ಮಾಧ್ಯಮ ಸ್ನೇಹಿತರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಂಸದರಾದ ರಮೇಶ ಜಿಗಜಿಣಗಿ ಅವರು ಭಾಗವಹಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿ ಪಥದಲ್ಲಿ ಕಳೆದ 12 ವರ್ಷಗಳ ಅವಧಿ ಮಹತ್ವದ ಮೈಲುಗಲ್ಲಾಗಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಪ್ರಧಾನ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಭ್ರಷ್ಟಾಚಾರ ರಹಿತ ಆಡಳಿತ, ಪಾರದರ್ಶಕ ವ್ಯವಸ್ಥೆ ಹಾಗೂ ಜನಕಲ್ಯಾಣ ಯೋಜನೆಗಳ ಮೂಲಕ ಹೊಸ ಬದಲಾವಣೆಗೆ ಕಾರಣರಾಗಿದ್ದಾರೆ ಎಂದು ತಿಳಿಸಿದರು.

‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬ ಧ್ಯೇಯದೊಂದಿಗೆ ಕೇಂದ್ರ ಸರ್ಕಾರವು ಸಮಾಜದ ಪ್ರತಿಯೊಂದು ವರ್ಗದ ಜನರ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ರೈತರು, ಯುವಕರು, ಮಹಿಳೆಯರು, ಬಡವರು ಸೇರಿದಂತೆ ಎಲ್ಲಾ ವರ್ಗದ ಜನರ ಜೀವನಮಟ್ಟ ಸುಧಾರಿಸಲು ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಸಂಸದರು ವಿವರಿಸಿದರು.

ಜಾಗತಿಕ ಮಟ್ಟದಲ್ಲಿ ಭಾರತವು ತನ್ನದೇ ಆದ ಸ್ಥಾನವನ್ನು ನಿರ್ಮಿಸಿಕೊಳ್ಳುತ್ತಿದ್ದು, ಆರ್ಥಿಕತೆ, ಮೂಲಸೌಕರ್ಯ, ತಂತ್ರಜ್ಞಾನ, ರಕ್ಷಣಾ ಕ್ಷೇತ್ರ ಸೇರಿದಂತೆ ವಿವಿಧ ವಲಯಗಳಲ್ಲಿ ದೇಶವು ಮುನ್ನಡೆಯುತ್ತಿದೆ. ವಿಶ್ವದ ಸವಾಲುಗಳ ನಡುವೆಯೂ ಭಾರತ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದತ್ತ ದೇಶ ಸಾಗುತ್ತಿದೆ. ಜನರ ಸಹಕಾರದೊಂದಿಗೆ ಈ ಗುರಿ ಸಾಧಿಸುವ ವಿಶ್ವಾಸವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಂವಾದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಮಾಧ್ಯಮ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande