
ಬಾಗಲಕೋಟೆ, 17 ಜೂನ್ (ಹಿ.ಸ.) :
ಆಂಕರ್ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಶಾಸಕ ಬಿ. ಜಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ರಬಕವಿ ಮುಸ್ಲಿಂ ಸಮಾಜದ ಅಂಜುಮನ್ ಕಮಿಟಿ ವತಿಯಿಂದ ಮಾಧ್ಯಮ ಗೋಷ್ಠಿ ನಡೆಸಲಾಯಿತು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಂಜುಮನ್ ಕಮಿಟಿ ಪದಾಧಿಕಾರಿಗಳು, ಜಮೀರ್ ಅಹ್ಮದ್ ಅವರು ಪಕ್ಷ ಸಂಘಟನೆ, ಜನಪರ ಕಾರ್ಯಗಳು ಹಾಗೂ ಸಮಾಜದ ವಿವಿಧ ವರ್ಗಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಯಕರಾಗಿದ್ದಾರೆ. ಅವರ ಅನುಭವ ಮತ್ತು ಆಡಳಿತ ಸಾಮರ್ಥ್ಯವನ್ನು ಪರಿಗಣಿಸಿ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯದ ರಾಜಕೀಯ ಬೆಳವಣಿಗೆಗಳಲ್ಲಿ ಜಮೀರ್ ಅಹ್ಮದ್ ಅವರು ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಬಂದಿದ್ದಾರೆ. ಅವರ ಸೇವೆಗೆ ಸೂಕ್ತ ಗೌರವ ನೀಡುವ ನಿಟ್ಟಿನಲ್ಲಿ ಸಚಿವ ಸ್ಥಾನ ಕಲ್ಪಿಸುವುದು ಅಗತ್ಯವಾಗಿದೆ ಎಂದು ಕಮಿಟಿ ಸದಸ್ಯರು ಅಭಿಪ್ರಾಯಪಟ್ಟರು
ಮುಸ್ಲಿಂ ಸಮಾಜ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿಗೆ ಧ್ವನಿಯಾಗಿರುವ ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ದೊರೆತರೆ ಸಮಾಜದ ಜನರಲ್ಲಿ ವಿಶ್ವಾಸ ಹೆಚ್ಚಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಅಂಜುಮನ್ ಕಮಿಟಿಯ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande