
ಕೊಪ್ಪಳ , 17 ಜೂನ್ (ಹಿ.ಸ.) :
ಆ್ಯಂಕರ್ : 2026-27ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ನಾನಾ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆ ಇಲಾಖೆ ವತಿಯಿಂದ 2026-27ನೇ ಸಾಲಿನ ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗುತ್ತಿರುವ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ ಬೆಳೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ, ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ, (ಗೇರು, ಪೇರಲ, ಮಾವು, ಬಾಳೆ, ದಾಳಿಂಬೆ, ಪಪ್ಪಾಯ, ಇತರೆ) ಕೊಯ್ಲೋತ್ತರ ನಿರ್ವಹಣೆ ಘಟಕಗಳಿಗೆ, ಸಂರಕ್ಷಿತ ಬೇಸಾಯ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಯಾಂತ್ರೀಕರಣ, ಡಿ.ಸಿ.ಸಿ.ಡಿ. ವತಿಯಿಂದ ಗೋಡಂಬಿ ಪ್ರದೇಶ ವಿಸ್ತರಣೆ ಹಾಗೂ ನಾನಾ ಘಟಕಗಳಿಗೆ ಸಹಾಯಧನ ನೀಡಲಾಗುತ್ತಿದೆ.
ಈ ಎಲ್ಲಾ ಯೋಜನೆಗಳಲ್ಲಿ ಕೇಂದ್ರ ವಲಯ, ರಾಜ್ಯ ವಲಯ ಮತ್ತು ಜಿಲ್ಲಾ ವಲಯ ಯೋಜನೆಗಳ ಸಹಾಯಧನ ಪಡೆಯಲು ಆಸಕ್ತ ರೈತರು ಜುಲೈ 5 ರೊಳಗಾಗಿ ಅರ್ಜಿ ಸಮೇತ ಅಗತ್ಯವಾದ ದಾಖಲಾತಿಗಳನ್ನು ಸಂಬಂಧಪಟ್ಟ ಆಯಾ ತಾಲ್ಲೂಕಾ ತೋಟಗಾರಿಕಾ ಕಛೇರಿಯಲ್ಲಿ ಸಲ್ಲಿಸಬೇಕು.
ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಟತಾವಾರು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳಾದ ಕೊಪ್ಪಳ ಮೊ.ಸಂ: 9611888607, ಗಂಗಾವತಿ ಮೊ.ಸಂ: 9480257282, ಕುಷ್ಟಗಿ ಮೊ.ಸಂ: 9743518608 ಹಾಗೂ ಯಲಬುರ್ಗಾ ಮೊ.ಸಂ: 9945644338 ಮತ್ತು ಕೊಪ್ಪಳ ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿಯಲ್ಲಿನ ಕೇಂದ್ರ ಸ್ಥಾನಿಕ ಸಹಾಯಕರ ಮೊ.ಸಂ: 8095359179, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ತೋಟಗಾರಿಕೆ ಜಂಟಿ ನಿರ್ದೇಶಕರಾದ ಕೃಷ್ಣ ಸಿ. ಉಕ್ಕುಂದ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್