ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಸಂಘಟನೆ ಬಲವರ್ಧನೆಗೆ ಬಿಜೆಪಿ ಮಹಾಶಕ್ತಿ ಕೇಂದ್ರ ಪ್ರಮುಖರ ಸಭೆ
ಬಾಗಲಕೋಟೆ, 17 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆಯನ್ನು ಇಂದು ನಡೆಸಲಾಯಿತು. ಸಭೆಯಲ್ಲಿ ಮುಂಬರುವ ಸಂಘಟನಾ ಕಾರ್ಯಚಟುವಟಿಕೆಗಳು ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸ
Sabhe


ಬಾಗಲಕೋಟೆ, 17 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆಯನ್ನು ಇಂದು ನಡೆಸಲಾಯಿತು. ಸಭೆಯಲ್ಲಿ ಮುಂಬರುವ ಸಂಘಟನಾ ಕಾರ್ಯಚಟುವಟಿಕೆಗಳು ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸವಿಸ್ತಾರವಾದ ಚರ್ಚೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಮುಖಂಡರು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಪ್ರಜಾಪ್ರಭುತ್ವದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು. ಮತದಾರರ ನೋಂದಣಿ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಅನರ್ಹ ಹೆಸರುಗಳ ಅಳಿಸುವಿಕೆ ಸೇರಿದಂತೆ ವಿವಿಧ ಪ್ರಕ್ರಿಯೆಗಳ ಕುರಿತು ಮಹಾಶಕ್ತಿ ಕೇಂದ್ರದ ಪ್ರಮುಖರಿಗೆ ಅಗತ್ಯ ಮಾಹಿತಿ ನೀಡಲಾಯಿತು.

ಮತದಾರರ ಪಟ್ಟಿಯಲ್ಲಿ ಯಾವುದೇ ಅರ್ಹ ಮತದಾರರು ಕೈತಪ್ಪದಂತೆ ನೋಡಿಕೊಳ್ಳುವುದು, ಹೊಸ ಮತದಾರರನ್ನು ಗುರುತಿಸಿ ನೋಂದಣಿ ಮಾಡಿಸುವುದು ಹಾಗೂ ಪರಿಷ್ಕರಣೆ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ಸಭೆಯಲ್ಲಿ ಮಾರ್ಗದರ್ಶನ ನೀಡಲಾಯಿತು.

ಇದೇ ಸಂದರ್ಭದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಯಿತು. ಬೂತ್ ಮಟ್ಟದಲ್ಲಿ ಪಕ್ಷದ ಚಟುವಟಿಕೆಗಳನ್ನು ಚುರುಕುಗೊಳಿಸುವುದು, ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸುವುದು ಹಾಗೂ ಮುಂಬರುವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುವ ಕುರಿತು ಪ್ರಮುಖರು ಅಭಿಪ್ರಾಯಗಳನ್ನು ಹಂಚಿಕೊಂಡರು.

ಸಭೆಯಲ್ಲಿ ಬಾದಾಮಿ ಮತಕ್ಷೇತ್ರದ ಮಹಾಶಕ್ತಿ ಕೇಂದ್ರದ ಪ್ರಮುಖರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಪಕ್ಷದ ಸಂಘಟನಾ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಸಂಕಲ್ಪ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande