
ಬಳ್ಳಾರಿ, 17 ಜೂನ್ (ಹಿ.ಸ.) :
ಆ್ಯಂಕರ್ : ನಗರದ ಕಂಟೋನ್ ಮೆಂಟ್ ಹತ್ತಿರದ ರಾಜೀವಗಾಂಧಿ ನಗರದ ಸರ್ಕಾರಿ ಶಾಲೆಯ ಪಕ್ಕದ ವಾರ್ಡ್ ನಂ.30 ರ ಡಿ.ರಾಮಾಂಜಿನಿ (41) ಕಾಣೆಯಾಗಿದ್ದಾರೆ ಎಂದು ಕೌಲ್ ಬಜಾರ್ ಪೆÇಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.
ಚಹರೆ ಗುರುತು: ಅಂದಾಜು 5.7 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ದೃಢ ಮೈಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಟೀ-ಶರ್ಟ್ ಹಾಗೂ ಸಿಮೆಂಟ್ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ವ್ಯಕ್ತಿ ಬಗ್ಗೆ ಸುಳಿವು ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145 ಅಥವಾ ಪಿಎಸ್ಐ ಮೊ.9480820308, ಪಿಐ ಮೊ.9480803047, ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್