ನಾಳೆ ವಿವಿಧ ಮಹನೀಯರ ಜಯಂತಿ ಆಚರಣೆ
ಬಳ್ಳಾರಿ, 17 ಜೂನ್ (ಹಿ.ಸ.) ; ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಜೂ.27 ರಂದು ಶ್ರೀ ಕೆಂಪೇಗೌಡ ಜಯಂತಿ, ಜುಲೈ 02 ರಂದು ಡಾ.ಫ.ಗು.ಹಳಕಟ್ಟಿಯವರ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವ ಕುರಿತು ಚರ್ಚಿಸಲು ನಾ
ನಾಳೆ ವಿವಿಧ ಮಹನೀಯರ ಜಯಂತಿ ಆಚರಣೆ


ಬಳ್ಳಾರಿ, 17 ಜೂನ್ (ಹಿ.ಸ.) ;

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಜೂ.27 ರಂದು ಶ್ರೀ ಕೆಂಪೇಗೌಡ ಜಯಂತಿ, ಜುಲೈ 02 ರಂದು ಡಾ.ಫ.ಗು.ಹಳಕಟ್ಟಿಯವರ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವ ಕುರಿತು ಚರ್ಚಿಸಲು ನಾಳೆ ಸಂಜೆ 4 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಏರ್ಪಡಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು.

ಸಭೆಗೆ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು, ಸಾರ್ವಜನಿಕರು ಭಾಗವಹಿಸಿ ಮಹನೀಯರ ಜಯಂತಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಲಹೆ ನೀಡಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande