

ಕುರುಗೋಡು, 17 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕದ 19 ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆಯನ್ನು ಟಾಟಾ ಪವರ್ ಕಂಪನಿಗೆ ನೀಡುವ ಪ್ರಸ್ತಾವನೆಯನ್ನು ತಿರಸ್ಕರಿಸಲು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ಬಳ್ಳಾರಿ ಜಿಲ್ಲಾ ಸಮಿತಿಯು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಬುಧವಾರ ಮನವಿ ಸಲ್ಲಿಸಿದೆ.
ಬೆಸ್ಕಾಂ ವ್ಯಾಪ್ತಿಯ 6, ಚೆಸ್ಕಾಂ ವ್ಯಾಪ್ತಿಯ 3, ಮೆಸ್ಕಾಂ ವ್ಯಾಪ್ತಿಯ 3, ಹೆಸ್ಕಾಂ ವ್ಯಾಪ್ತಿಯ 3 ಹಾಗೂ ಜೆಸ್ಕಾಂ ವ್ಯಾಪ್ತಿಯ 4 ಜಿಲ್ಲೆಗಳ ಒಟ್ಟು ಕರ್ನಾಟಕದ 19 ಕಂದಾಯ ಜಿಲ್ಲೆಗಳಲ್ಲಿ ವಿದ್ಯುತ್ ಪೂರೈಕೆ ವ್ಯವಸ್ಥೆಯನ್ನು ಟಾಟಾ ಪವರ್ಗೆ ಪರವಾನಿಗೆ ನೀಡುವ ಮೂಲಕ ಖಾಸಗೀಕರಣಕ್ಕೆ ಅವಕಾಶ ನೀಡಬಾರದು ಎಂದು ಸಂಘಟನೆಯು ಕೋರಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್