ಮೊಹರಂ ಹಬ್ಬ : ಹಸಿರು ಮರ ಕಡಿಯಬೇಡಿ
ಬಳ್ಳಾರಿ, 17 ಜೂನ್ (ಹಿ.ಸ.) : ಆ್ಯಂಕರ್ : ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿರುವ ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಗೆ ಧಕ್ಕೆ ಬರದಂತೆ ಸಾರ್ವಜನಿಕರು ಹಸಿರು ಮರಗಳನ್ನು ಕಡಿಯಬಾರದು ಎಂದು ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್. ಬಸವರಾಜ ಅವರು ತಿಳಿಸಿದ
ಮೊಹರಂ ಹಬ್ಬ : ಹಸಿರು ಮರ ಕಡಿಯಬೇಡಿ


ಬಳ್ಳಾರಿ, 17 ಜೂನ್ (ಹಿ.ಸ.) :

ಆ್ಯಂಕರ್ : ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿರುವ ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಗೆ ಧಕ್ಕೆ ಬರದಂತೆ ಸಾರ್ವಜನಿಕರು ಹಸಿರು ಮರಗಳನ್ನು ಕಡಿಯಬಾರದು ಎಂದು ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್. ಬಸವರಾಜ ಅವರು ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ತಾಲ್ಲೂಕು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮೊಹರಂ ಹಬ್ಬವನ್ನು ಸೌಹಾರ್ದತೆಯಿಂದ ಆಚರಿಸಲಾಗುತ್ತದೆ. ಆದರೆ, ಈ ಹಬ್ಬದ ಪ್ರಯುಕ್ತ ರಾತ್ರಿ ಸಮಯದಲ್ಲಿ ನಡೆಸಲಾಗುವ ‘ಆಲಾಯಿ ಕುಣಿತ' ಮತ್ತು ‘ಬೆಂಕಿ ಹಾಕುವ' ಕಾರ್ಯಕ್ರಮಗಳಿಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹಸಿರು ಮರಗಳನ್ನು ಕಡಿದು ಕುಣಿಗೆ ಹಾಕುವ ಪರಿಪಾಠವಿದೆ. ಇದರಿಂದಾಗಿ ಪರಿಸರ ಸಂರಕ್ಷಣೆಗೆ ಭಾರಿ ಧಕ್ಕೆ ಉಂಟಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಹಸಿರು ಮರಗಳನ್ನು ಕಡಿಯುವುದು ಕರ್ನಾಟಕ ಅರಣ್ಯ ಕಾಯ್ದೆ ಮತ್ತು ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆಯ ಉಲ್ಲಂಘನೆಯಾಗಿದ್ದು, ಇದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಳಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಮೊಹರಂ ಹಬ್ಬದ ಸಲುವಾಗಿ ಯಾವುದೇ ಹಸಿರು ಮರಗಳನ್ನು ಕಡಿಯದೇ, ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಸಾರ್ವಜನಿಕರು ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande