ಡಾ.ತೃಪ್ತಿ ಎನ್ ಎಸ್ ಗೆ ಚಿನ್ನದ ಪದಕ ಮತ್ತು ನಗದು ಬಹುಮಾನ
ಡಾ.ತೃಪ್ತಿ ಎನ್ ಎಸ್ ಗೆ ಚಿನ್ನದ ಪದಕ ಮತ್ತು ನಗದು ಬಹುಮಾನ
ಕೋಲಾರ ಮೂಲದ ಡಾ.ತೃಪ್ತಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಚಿನ್ನದ ಪದಕ ಮತ್ತು ನಗದು ಬಹುಮಾನ ಸ್ವೀಕರಿಸಿದರು.


ಕೋಲಾರ, ಜೂ.೧೭ (ಹಿ.ಸ) :

ಆಂಕರ್ : ಕೋಲಾರ ನಗರ ನಿವಾಸಿ ಹಾಗೂ ತುಮಕೂರಿನ ಶ್ರೀದೇವಿ ವೈದ್ಯಕೀಯ ಕಾಲೇಜಿನ ಡಾ.ತೃಪ್ತಿ ಎನ್ ಎಸ್ ಅವರು ಎಂಡಿ (ಎರ್ಮೆಜೆನ್ಸಿ ಮೆಡಿಸಿನ್) ವಿಭಾಗದಲ್ಲಿ ಹೆಚ್ಚು ಅಂಕಗಳನ್ನು ಪಡೆದಿದ್ದಕ್ಕೆ ಚಿನ್ನದ ಪದಕ ಹಾಗೂ ನಗದು ಬಹುಮಾನವನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸ್ವೀಕರಿಸಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ೨೮ ಘಟಿಕೋತ್ಸವದಲ್ಲಿ ಡಾ.ತೃಪ್ತಿ ಎನ್ ಎಸ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಿನ್ನದ ಪದಕ ಹಾಗೂ ನಗದು ಬಹುಮಾನ ವಿತರಿಸಿದರು.

ಡಾ. ತೃಪ್ತಿ ಎನ್ ಎಸ್ ಅವರು ಕೋಲಾರ ನಗರದ ಎಸ್.ಜಿ. ಲೇಔಟ್ ನಿವಾಸಿಗಳಾದ ಮೇಡತಂಬಿಹಳ್ಳಿಯ ಎನ್.ಶ್ರೀನಿವಾಸರೆಡ್ಡಿ ಮತ್ತು ಸುನೀತಾ ದಂಪತಿಯ ಪುತ್ರಿ. ಎನ್. ಶ್ರೀನಿವಾಸರೆಡ್ಡಿ ಅವರು ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಧೀಕ್ಷಕರಾಗಿ ಕೋಲಾರದಲ್ಲಿ ಸೇವೆ ಸಲ್ಲಿಸುತ್ತಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಮಿತಿ ಸದಸ್ಯರಾಗಿದ್ದಾರೆ.

ಡಾ.ತೃಪ್ತಿ ಅವರ ಈ ಸಾಧನೆಗೆ ಕುಟುಂಬದವರು, ಬಂಧುಗಳು, ಸ್ನೇಹಿತರು ಹಾಗೂ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುವ ಮೂಲಕ ಸಮಾಜಕ್ಕೆ ಸೇವೆ ಮಾಡಬೇಕು ಎಂಬುದು ತಮ್ಮ ಉದ್ದೇಶ ಎಂದು ಡಾ. ತೃಪ್ತಿ ಎನ್ ಎಸ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande