
ಬಾಗಲಕೋಟೆ, 17 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ವೀರ ಪುರುಷ, ಶೌರ್ಯ ಮತ್ತು ಸ್ವಾಭಿಮಾನದ ಪ್ರತೀಕವಾದ ಮಹಾರಾಣಾ ಪ್ರತಾಪ್ ಸಿಂಗ್ ಅವರ ಜಯಂತಿಯನ್ ಭಕ್ತಿ ಹಾಗೂ ಗೌರವದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಮಹಾರಾಣಾ ಪ್ರತಾಪ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರ ಜೀವನ, ಹೋರಾಟ ಮತ್ತು ದೇಶಭಕ್ತಿಯ ಕುರಿತು ಗಣ್ಯರು ಮಾತನಾಡಿದರು. ಸಮಾಜದ ವಿವಿಧ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾರಾಣಾ ಪ್ರತಾಪ್ ಅವರ ಆದರ್ಶಗಳನ್ನು ಸ್ಮರಿಸಿದರು.
ಮಹಾರಾಣಾ ಪ್ರತಾಪ್ ಸಿಂಗ್ ಅವರು ಮೇವಾಡದ ವೀರ ರಾಜನಾಗಿ ತಮ್ಮ ಧೈರ್ಯ, ತ್ಯಾಗ ಹಾಗೂ ಸ್ವಾಭಿಮಾನಕ್ಕಾಗಿ ಇತಿಹಾಸದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ. ಅವರ ಜೀವನದ ಹೋರಾಟಗಳು ಇಂದಿನ ಪೀಳಿಗೆಗೆ ಪ್ರೇರಣೆಯಾಗಿವೆ ಎಂದು ಮುಖಂಡರು ಹೇಳಿದರು.
ಮುಧೋಳದಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ದೇಶಭಕ್ತಿ ಘೋಷಣೆಗಳು ಮೊಳಗಿದವು. ಯುವಕರು ಉತ್ಸಾಹದಿಂದ ಪಾಲ್ಗೊಂಡು ಮಹಾರಾಣಾ ಪ್ರತಾಪ್ ಅವರ ಶೌರ್ಯ ಮತ್ತು ತ್ಯಾಗದ ಸಂದೇಶವನ್ನು ಸಾರಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು, ಹಿರಿಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande