ಇದ್ದಲಗಿ ಗ್ರಾಮಸ್ಥರ ಅಹೋರಾತ್ರಿ ಧರಣಿಗೆ 42ನೇ ದಿನ : ಮೂಲಸೌಲಭ್ಯಕ್ಕಾಗಿ ಸಂತ್ರಸ್ತರ ಹೋರಾಟ ತೀವ್ರ
ಬಾಗಲಕೋಟೆ, 17 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಇದ್ದಲಗಿ ಗ್ರಾಮದ ಸಂತ್ರಸ್ತರು ಮೂಲಸೌಲಭ್ಯಗಳನ್ನು ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರ 42ನೇ ದಿನಕ್ಕೆ ಕಾಲಿಟ್ಟಿದೆ. ಗ್ರಾಮದ ಸಮಸ್ಯೆಗಳ
Protest


ಬಾಗಲಕೋಟೆ, 17 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಇದ್ದಲಗಿ ಗ್ರಾಮದ ಸಂತ್ರಸ್ತರು ಮೂಲಸೌಲಭ್ಯಗಳನ್ನು ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರ 42ನೇ ದಿನಕ್ಕೆ ಕಾಲಿಟ್ಟಿದೆ.

ಗ್ರಾಮದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿರುವ ಸಂತ್ರಸ್ತರು, ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳು ತಮ್ಮ ಬೇಡಿಕೆಗಳಿಗೆ ಸ್ಪಂದಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.

ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್, ವಸತಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳ ಕೊರತೆಯಿಂದ ಗ್ರಾಮಸ್ಥರು ಹಲವು ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗಳನ್ನು ಪರಿಹರಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಸಮರ್ಪಕ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

42 ದಿನಗಳಿಂದ ನಡೆಯುತ್ತಿರುವ ಧರಣಿಯಲ್ಲಿ ಮಹಿಳೆಯರು, ಹಿರಿಯರು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿ ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ. ಮಳೆ, ಬಿಸಿಲನ್ನೂ ಲೆಕ್ಕಿಸದೆ ಗ್ರಾಮಸ್ಥರು ಹೋರಾಟ ಮುಂದುವರಿಸಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿದ್ದಾರೆ.

ಸಂತ್ರಸ್ತರ ಬೇಡಿಕೆಗಳನ್ನು ಪರಿಗಣಿಸಿ ಸಂಬಂಧಿಸಿದ ಇಲಾಖೆಗಳು ತಕ್ಷಣ ಕ್ರಮ ಕೈಗೊಂಡು ಗ್ರಾಮದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande