ರಾಂಚಿಯ ಆರ್.ಎಸ್.ಎಸ್ ಕಚೇರಿಗೆ ಪೆಟ್ರೋಲ್ ಬಾಂಬ್ ಎಸೆತ ; ಆರೋಪಿಗಳ ಪತ್ತೆಗೆ ಪೊಲೀಸರ ಬಲೆ
ಉಂಟಾಗಿದೆ
ರಾಂಚಿ ಸಂಘದ ಕಾರ್ಯಾಲಯದಲ್ಲಿ ಪೋಲಿಸರ ಪರಿಶೀಲನೆ


ರಾಂಚಿ, 17 ಜೂನ್ (ಹಿ.ಸ.) :

ಆ್ಯಂಕರ್ : ಜಾರ್ಖಂಡ್ ರಾಜಧಾನಿ ರಾಂಚಿಯ ಚುಟಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾರಣಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌.ಎಸ್‌.ಎಸ್) ಪ್ರಾಂತ ಕಚೇರಿಯ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಘಟನೆಯಿಂದ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.

ಮಾಹಿತಿಯ ಪ್ರಕಾರ, ಇಬ್ಬರು ಶಂಕಿತರು ಸಾಸ್ ಬಾಟಲಿಗಳಲ್ಲಿ ಪೆಟ್ರೋಲ್ ತುಂಬಿ ಕಚೇರಿಯತ್ತ ಎಸೆದಿದ್ದಾರೆ. ಆದರೆ ಎಸೆಯಲಾದ ಎರಡೂ ಬಾಟಲಿಗಳು ಕಚೇರಿಯ ಗಡಿಯ ಗೋಡೆಯ ಮುಂಭಾಗದಲ್ಲೇ ಬಿದ್ದಿದ್ದು, ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ನಗರ ಪೊಲೀಸ್ ಅಧೀಕ್ಷಕ (ಸಿಟಿ ಎಸ್ಪಿ) ಪರಾಸ್ ರಾಣಾ, ಮಾಹಿತಿ ದೊರೆಯುತ್ತಿದ್ದಂತೆಯೇ ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ತನಿಖೆಗೆ ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಸೇರಿದಂತೆ ಹಲವು ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ. ಕೃತ್ಯ ಎಸಗಿದ ಇಬ್ಬರು ಯುವಕರ ಚಲನವಲನಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅವರ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದರು.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಬಾಬೂಲಾಲ್ ಮರಾಂಡಿ, ಶಾಸಕ ಸಿ.ಪಿ. ಸಿಂಗ್ ಹಾಗೂ ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್ ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಘಟನೆಯ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಸರ್ಕಾರ ಮತ್ತು ಪೊಲೀಸರಿಗೆ ಆಗ್ರಹಿಸಿದರು.

ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಶೀಘ್ರವೇ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande