
ಕೊಪ್ಪಳ, 17 ಜೂನ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ನಗರಸಭೆ ವತಿಯಿಂದ ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯದ ಸಾರ್ವಜನಿಕರಿಗೆ ಶಸ್ತ್ರ ಚಿಕಿತ್ಸೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೊಪ್ಪಳ ನಗರಸಭೆಯ ಪೌರಾಯುಕ್ತರಾದ ಮಂಜುನಾಥ ಗುಂಡೂರ್ ಅವರು ತಿಳಿಸಿದ್ದಾರೆ.
2025-26ನೇ ಸಾಲಿನ ಶೇ.24.10ರ ಯೋಜನೆಯಡಿ ಈ ಸೌಲಭ್ಯ ಕಲ್ಪಿಸಲಾಗಿದ್ದು, ಜಿಲ್ಲಾಧಿಕಾರಿಗಳ ಆದೇಶದಂತೆ ಕೊಪ್ಪಳ ನಗರಸಭೆ ವ್ಯಾಪ್ತಿಯ ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯಕ್ಕೆ ಸೇರಿದ ಅರ್ಹ ಫಲಾನುಭವಿಗಳಿಗೆ ಶೇ.40ರಷ್ಟು ವೈದ್ಯಕೀಯ ಸಹಾಯಧನ ಮಂಜೂರು ಮಾಡಲು ಉದ್ದೇಶಿಸಲಾಗಿದೆ. ಆಸಕ್ತರು ಜೂನ್ 30 ರೊಳಗಾಗಿ ಕೊಪ್ಪಳ ನಗರಸಭೆ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವವರು ಕೊಪ್ಪಳ ನಗರದ ಕಾಯಂ ನಿವಾಸಿಯಾಗಿರಬೇಕು. ಜೊತೆಗೆ ಪ್ರಸ್ತುತ ಸಾಲಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದ ಅಧಿಕೃತ ವೈದ್ಯಕೀಯ ಪ್ರಮಾಣ ಪತ್ರ, ಆಸ್ಪತ್ರೆಯ ಖರ್ಚು ವೆಚ್ಚದ ಬಿಲ್ಲುಗಳು, ಎರಡು ಪಾಸ್ಪೆÇೀರ್ಟ್ ಅಳತೆಯ ಭಾವಚಿತ್ರಗಳು, ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ನಿಗದಿತ ಅವಧಿ ನಂತರ ಸಲ್ಲಿಕೆಯಾಗುವ ಹಾಗೂ ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್